ದೇವರಾಜ ಅರಸು ಜಯಂತ್ಯುತ್ಸವ 20ಕ್ಕೆ

13sor2
ಸೊರಬ ತಾಲೂಕು ಕಚೇರಿ ಸಭಾಂಗಣದಲ್ಲಿ ದೇವರಾಜು ಅರಸು ಆಚರಣೆ ಪ್ರಯುಕ್ತ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಸಭೆ ನಡೆಸಿದರು. ಗಣಪತಿ ನಾಯಕ್, ನವೀನ್‌ಕುಮಾರ್ ಇತರರಿದ್ದರು.
Published on

ಸೊರಬ: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜಯಂತ್ಯುತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಮಂಜುಳಾ ಹೆಗಡಾಳ್ ಹೇಳಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ದೇವರಾಜು ಅರಸು ಆಚರಣೆ ಪ್ರಯುಕ್ತ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಆ.20ರಂದು ಬೆಳಗ್ಗೆ 11ಕ್ಕೆ ಶ್ರೀರಂಗ ಸಭಾಂಗಣದಲ್ಲಿ ಅರಸು ಅವರ ಜನ್ಮದಿನಾಚರಣೆ ಆಯೋಜಿಸಿದ್ದು, ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಜಯಂತ್ಯುತ್ಸವದಲ್ಲಿ ಭಾಗವಹಿಸಬೇಕು ಎಂದು ಸೂಚಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇವಣಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ತಲಾ ಇಬ್ಬರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು, ವಿವಿಧ ಹಾಸ್ಟೆಲ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪಾಲಕರನ್ನು ಸನ್ಮಾನಿಸಲಾಗುವುದು ಎಂದರು.

ಚಿಂತಕ ರಾಜಪ್ಪ ಮಾಸ್ತರ್, ಪಿಎಸ್‌ಐ ನವೀನಕುಮಾರ್, ಜಿಪಂ ಇಂಜಿನಿಯರ್ ಗಣಪತಿ ನಾಯಕ್, ತಾಲೂಕು ಆರ್ಯ ಈಡಿಗ ಸಮಾಜದ ಮಾಜಿ ಅಧ್ಯಕ್ಷ ಅಜ್ಜಪ್ಪ, ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ಮಂಜುನಾಥ್ ಓಟೂರು, ಸಂತೋಷ್, ಅಶೋಕ್, ಶಂಕರಗುರು, ಕುಬೇರ, ಬಾಲಚಂದ್ರ, ಮಾರುತಿ, ನಾಗರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net