ಅಧ್ಯಯನದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ

22HHR1
ಪದವಿಪೂರ್ವ ಶಿಕ್ಷಣ ಇಲಾಖೆಯ ದಾವಣಗೆರೆ ಜಿಲ್ಲಾ ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿದ ಹೊಳೆಹೊನ್ನೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಿ.ಪಳನಿವೇಲು ಅವರನ್ನು ಸನ್ಮಾನಿಸಲಾಯಿತು. ರಾಮಕೃಷ್ಣ ಭಟ್, ಬಿ.ಪಿ.ಹಾಲೇಶ್, ಪೂರ್ಣಿಮಾ, ನಾಗರಾಜ್ ಇತರರಿದ್ದರು.
Published on

ಹೊಳೆಹೊನ್ನೂರು: ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಿ.ಪಳನಿ ವೇಲು ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ಪದವಿಪೂರ್ವ ಶಿಕ್ಷಣ ಇಲಾಖೆಯ ದಾವಣಗೆರೆ ಜಿಲ್ಲಾ ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿದ ಡಿ.ಪಳನಿ ವೇಲು ಅವರಿಗೆ ಏರ್ಪಡಿಸಿದ್ದ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಪಾಲಿಸಬೇಕು. ಆಸಕ್ತಿಯಿಂದ ಅಧ್ಯಯನ ಮಾಡಬೇಕು. ಸೇವಾವಧಿಯಲ್ಲಿ ಉತ್ತಮ ಅನುಭವ ದೊರೆತಿದೆ. ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಉತ್ಸಾಹದಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಉಪನ್ಯಾಸಕ ರಾಮಕೃಷ್ಣ ಭಟ್ ಅವರು ಅರ್ಥಶಾಸ್ತ್ರ ವಿಷಯದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು 10 ಸಾವಿರ ರೂ. ದೇಣಿಗೆ ನೀಡಿದರು. ಉಪನ್ಯಾಸಕರಾದ ಬಿ.ಪಿ.ಹಾಲೇಶ್, ಪೂರ್ಣಿಮಾ, ನಾಗರಾಜ್, ಶಾಂತಲಾ ಕಮತಗಿ, ರಾಜೇಶ್ವರಿ, ಎಚ್.ಎಸ್.ಪ್ರೇಮಲತಾ, ಜಯಪ್ಪ, ರೇಣುಕಾ, ಇ.ಜಿ.ವಾಣಿ, ಜೆ.ಲಿಂಗರಾಜು, ಬಿ.ಪಿ.ಹಾಲೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net