

ಭದ್ರಾವತಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಹೊಸಮನೆಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಬಿಜೆಪಿ ಕಾರ್ಯಕರ್ತರು ರುದ್ರಾಭಿಷೇಕ ಮಾಡಿಸಿದರು.
ಬಿ.ಎಸ್.ಯಡಿಯೂರಪ್ಪ ಅವರಿಗೆ ದೇವರು ಆರೋಗ್ಯ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದವರಿಗೆ ಸಿಹಿ ಹಂಚಿದರು. ನಂತರ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಿದರು.
ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಕಂಡ ಅಪರೂಪದ ರಾಜಕಾರಣಿ, ಮುಖ್ಯಮಂತ್ರಿಯಾಗಿ ಮಾಡಿರುವ ಸೇವೆಗಳು ಅಪಾರ ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಆನಂದಕುಮಾರ್, ಮುಖಂಡರಾದ ರಾಮಲಿಂಗಯ್ಯ, ಹಾಲೇಶ್, ಕೆ.ಎಚ್.ತೀರ್ಥಯ್ಯ, ಮಂಜಣ್ಣ, ಅಣ್ಣಪ್ಪ, ಎಚ್.ಎಸ್.ಸುಬ್ಬಣ್ಣ, ರಾಜಶೇಖರ್, ಮಂಜುಳಾ ಇತರರಿದ್ದರು.