

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನಹಿತ ಕಾರ್ಯವೆಂದರೆ ಇಂದಿಗೂ ಉತ್ಸಾಹ ಮೂಡುತ್ತದೆ. ಅವರ ಕಾರ್ಯಕ್ಷಮತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಮಾದರಿ ಎಂದು ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಹೇಳಿದರು.
ಯಡಿಯೂರಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ತಾಲೂಕು ಬಿಜೆಪಿ ಘಟಕ ಶೀ ಹುಚ್ಚರಾಯಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ಪವಮಾನ ಹೋಮ, ಲಲಿತಾ ಸಹಸ್ರನಾಮ ಪಾರಾಯಣ, ಶ್ರೀ ದುರ್ಗಾ ಹೋಮ ಕಾರ್ಯಕ್ರಮದಲ್ಲಿ ಮಾತನಾಡಿದರು.
ವೀರಶೈವ ಸೊಸೈಟಿ ನಿರ್ದೇಶಕರಾಗಿ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟ ಯಡಿಯೂರಪ್ಪ ಅವರು, ನಂತರ ರಾಜಕಾರಣದಲ್ಲಿ ಪುರಸಭೆಯಿಂದ ಆರಂಭಿಸಿ ಈಗ ರಾಷ್ಟ್ರೀಯ ನಾಯಕರಾಗಿ ಬೆಳೆದಿದ್ದಾರೆ. ತಾಲೂಕಿನಲ್ಲಿ ಅನುಷ್ಠಾನಗೊಳಿಸಿದ ಶಾಶ್ವತ ನೀರಾವರಿ ಯೋಜನೆಯಿಂದ ಅನುಕೂಲವಾಗಿದೆ. ಅವರ ದೂರದೃಷ್ಟಿ ಲದಿಂದ ಶಿಕಾರಿಪುರ ತಾಲೂಕು ಸಮಗ್ರ ಅಭಿವೃದ್ಧಿ ಕಂಡಿದೆ ಎಂದರು.
ಯಡಿಯೂರಪ್ಪ ಅವರ ಸಂಘಟಿತ ಪ್ರಯತ್ನ, ಪರಿಶ್ರಮ, ನಿರಂತರ ಹೋರಾಟದಿಂದಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿ ಮೊದಲ ಬಾರಿಗೆ ಖಾತೆ ತೆರೆಯಿತು. ಜನಸೇವೆಯಲ್ಲಿ ಐದು ದಶಕಗಳನ್ನು ಪೂರೈಸಿದ ಮಹಾನಾಯಕ. ಅವರ ಕಾರ್ಯ ಶೈಲಿಯ ಪ್ರೇರಣೆಯಿಂದ ಸಹಸ್ರಾರು ಕಾರ್ಯಕರ್ತರು ಇಂದು ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಸಂಕ್ಲಾಪುರದ ಹನುಮಂತಪ್ಪ ಮಾತನಾಡಿ, ಯಡಿಯೂರಪ್ಪ ಅವರ ಜನ್ಮದಿನವನ್ನು ಕಾರ್ಯಕರ್ತರು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದರಿಂದ ತಾಲೂಕಿನ ಜನರ ಸಮೃದ್ಧಿಗಾಗಿ ಪ್ರಾರ್ಥಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರ ಅಭಿಲಾಷೆಯಿಂದ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಪ್ರಮುಖರಾದ ಬಿ.ಡಿ.ಭೂಕಾಂತ್, ಚನ್ನವೀರಪ್ಪ, ಕೊಳಗಿ ರೇವಣಪ್ಪ, ಕವಲಿ ಸುಬ್ರಹ್ಮಣ್ಯ, ಸಣ್ಣಹನುಮಂತಪ್ಪ, ವಸಂತ ಗೌಡ, ಸಿದ್ಲಿಂಗಪ್ಪ, ಮಾಜಿ ರಾಘವೇಂದ್ರ, ರಾಮಾನಾಯ್ಕ, ರೇಣುಕಾ ಹನುಮಂತಪ್ಪ, ಅಪರ್ಣಾ ಗುರುಮೂರ್ತಿ ಇತರರಿದ್ದರು.