ಲೈಸೆನ್ಸ್‌ರಹಿತ ವಾಹನ ಚಾಲನೆ ಅಪರಾಧ

31Thyagarthi 3
ತ್ಯಾಗರ್ತಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಿಎಸ್‌ಐ ಪ್ರವೀಣ್ ಮಾತನಾಡಿದರು. ಎಲ್.ಆರ್.ವೀರಪ್ಪ, ತೊಳಜಾನಾಯ್ಕ, ಕಮಲಾಪತಿ ಇದ್ದರು.
Published on

ತ್ಯಾಗರ್ತಿ: ವಿದ್ಯಾರ್ಥಿಗಳು ಶಿಕ್ಷಣ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ಕೆಟ್ಟ ಆಕರ್ಷಣೆಗಳಿಂದ ದೂರವಿರಬೇಕು ಎಂದು ಆನಂದಪುರ ಪಿಎಸ್‌ಐ ಪ್ರವೀಣ್ ಹೇಳಿದರು.

ವಿವೇಕಾನಂದ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬಾಲ್ಯವಿವಾಹ ತಡೆ, ಪೋಕ್ಸೋ ಕಾಯ್ದೆ ಮತ್ತು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ವ್ಯಕ್ತಿಗಳಿಂದ ಶೋಷಣೆ ಆದರೆ ಮಕ್ಕಳು ತಕ್ಷಣ ಪಾಲಕರು ಹಾಗೂ ಶಿಕ್ಷಕರ ಗಮನಕ್ಕೆ ತರಬೇಕು. ಲೈಸೆನ್ಸ್ ಇಲ್ಲದೆ ವಾಹನ ಚಲಾಯಿಸುವುದು ಅಪರಾಧ. ಅಪ್ರಾಪ್ತರು ವಾಹನ ಚಾಲನೆ ಮಾಡಿ ಅಪಘಾತ ಸಂಭವಿಸಿದರೆ ಪಾಲಕರೇ ಹೊಣೆಗಾರರಾಗುತ್ತಾರೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಬಳಕೆ, ಅಪರಾಧ ಚಟುವಟಿಕೆಗಳಿಂದ ದೂರ ಇರಬೇಕು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದರೆ ಸರ್ಕಾರಿ ಉದ್ಯೋಗ ಪಡೆಯಲು ತೊಂದರೆಯಾಗುತ್ತದೆ. ಇತ್ತೀಚೆಗೆ ಸೈಬರ್ ಕ್ರೈಂ ಜಾಸ್ತಿಯಾಗಿದ್ದು, ಇದರಲ್ಲಿ ಹಣ ಕಳೆದುಕೊಂಡರೆ ಮರಳಿ ಸಿಗುವುದಿಲ್ಲ ಎಂದರು. ವಿದ್ಯಾಸಂಸ್ಥೆ ನಿರ್ದೇಶಕ ಎಲ್.ಆರ್.ವೀರಪ್ಪ, ಮುಖ್ಯಶಿಕ್ಷಕ ತೊಳಜಾನಾಯ್ಕ, ಶಿಕ್ಷಕ ಕಮಲಾಪತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net