ಶೈಕ್ಷಣಿಗೆ ಪ್ರಗತಿಗೆ ಪ್ರೋತ್ಸಾಹ ಅವಶ್ಯ

30hos1p jayanagara
ಹೊಸನಗರದ ಮೇಲಿನಬೆಸಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೃತ್ಯ ಸೌರಭ ಕಾರ್ಯಕ್ರಮದಲ್ಲಿ ಶ್ರೀನಿವಾಸ ರೆಡ್ಡಿ, ಪೂರ್ಣಿಮಾ ಸೋಮಶೇಖರ್, ಎಚ್.ಆರ್.ಸುರೇಸ್, ವಿ.ರಂಗಸ್ವಾಮಿ, ಗುರುಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.
Published on

ಹೊಸನಗರ: ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿದೆ ಎಂದು ಮೇಲಿನಬೆಸಿಗೆ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಅಭಿಪ್ರಾಯಪಟ್ಟರು.

ಮೇಲಿನಬೆಸಿಗೆ ಗ್ರಾಮದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಉತ್ಸವ ನೃತ್ಯ ಸೌರಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಶಿಕ್ಷಣದ ಜತೆ ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯ. ಶಾಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಲು ಸಿದ್ಧ ಎಂದು ತಿಳಿಸಿದರು.

ಜ.31ಕ್ಕೆ ಸೇವೆಯಿಂದ ನಿವೃತ್ತಿಯಾಗಲಿರುವ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರ ರಾವ್ ಅವರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗ್ರಾಪಂ ಉಪಾಧ್ಯಕ್ಷೆ ಪೂರ್ಣಿಮಾ ಸೋಮಶೇಖರ್ ಬಹುಮಾನ ವಿತರಿಸಿದರು.

ಗ್ರಾಪಂ ಸದಸ್ಯರಾದ ಜ್ಯೋತಿ, ಚಂದ್ರಕಲಾ, ಲಕ್ಷ್ಮಣ ಗೌಡ, ಲಕ್ಷ್ಮೀದೇವಿ, ನಾಗರಾಜ್, ಶಾಂತಾ ಪಾಂಡು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಚ್.ಆರ್.ಸುರೇಶ್, ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ವಿ.ರಂಗಸ್ವಾಮಿ, ಮುಖ್ಯಶಿಕ್ಷಕ ಗುರುಮೂರ್ತಿ, ಆರ್.ನಾಗಭೂಷಣ, ಅವಿನಾಶ್, ಸುಧೀರ್ ಶೆಟ್ಟಿ, ಗೋಪಿನಾಥ್, ಪುಟ್ಟಸ್ವಾಮಿ, ಸುಮಾಲಿನಿ, ಸಲ್ಮಾ, ಶಿಲ್ಪಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net