

ಸೊರಬ: ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಿದವರು ಸಾವಿತ್ರಿಬಾಯಿ ಫುಲೆ ಎಂದು ತಾಪಂ ಇಒ ಡಾ. ಪ್ರದೀಪ್‌ಕುಮಾರ್ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿಂದ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಗುರುತಿಸಿಕೊಳ್ಳಲು ಶಿಕ್ಷಣ ಕಾರಣ. ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿದೆ. ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಹಿಳೆಯರು ಸ್ಥಾನಮಾನ ಹೆಚ್ಚಿಸಿಕೊಳ್ಳುವ ಜತೆಗೆ ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸುತ್ತಿದ್ದಾರೆ. ಕುಟುಂಬ ನಿರ್ವಹಣೆ ಜತೆಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ನಿವೃತ್ತಿ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು. ಅಧ್ಯಾಪಕಿಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಕೀಲರ ಸಂಘದ ತಾಲೂಕು ಉಪಾಧ್ಯಕ್ಷೆ ಮಂಜುಳಾ, ಬಿಇಒ ಪುಷ್ಪಾ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಓಟೂರು, ಡಾ. ಶ್ರೀಕಾಂತ್, ಸಾವಿತ್ರಿಬಾಯಿ ಫುಲೆ ಸಂಘದ ತಾಲೂಕು ಅಧ್ಯಕ್ಷೆ ಶಶಿಕಲಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ, ಸಂಪನ್ಮೂಲ ಕೇಂದ್ರದ ಸವಿತಾ, ಶಿಕ್ಷಕಿ ಶಾರದಾ, ಶಕುಂತಲಾ, ಯಶೋದಾ ಇತರರಿದ್ದರು.