ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಿ

3sgr1
ಸಾಗರದಲ್ಲಿ ದೇವಗಿರಿ ಕ್ಷೇಮಾಭಿವೃದ್ಧಿ ವೇದಿಕೆಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಎಚ್.ಎನ್.ವಿದ್ಯಾಧರ, ಜಯಪ್ಪ, ಅವನಿ, ಓಂಕಾರಪ್ಪ ಇತರರಿದ್ದರು.
Published on

ಸಾಗರ: ಉನ್ನತ ಶಿಕ್ಷಣದ ನಂತರ ಉದ್ಯೋಗ ಪಡೆಯುವ ಜತೆಗೆ ಇತರರಿಗೆ ಉದ್ಯೋಗ ಕಲ್ಪಿಸುವ ರೀತಿ ಬೆಳೆಯಬೇಕು. ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಿಮುಲ್ ಅಧ್ಯಕ್ಷ ಎಚ್.ಎನ್.ವಿದ್ಯಾಧರ ಹೇಳಿದರು.

ನಗರದ ದೇವಗಿರಿ ಬಡಾವಣೆಯಲ್ಲಿ ದೇವಗಿರಿ ಕ್ಷೇಮಾಭಿವೃದ್ಧಿ ವೇದಿಕೆಯಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾಯಕ್ರಮದಲ್ಲಿ ಮಾತನಾಡಿ, ಮಕ್ಕಳ ಶಿಕ್ಷಣದ ಬಗ್ಗೆ ಪಾಲಕರು ಹೆಚ್ಚಿನ ಮಹತ್ವ ನೀಡುತ್ತಾರೆ. ವಿದ್ಯಾರ್ಥಿಗಳು ಉನ್ನತ ಗುರಿ ಸಾಧಿಸಲು ಮುಂದಾಗಬೇಕು ಎಂದು ತಿಳಿಸಿದರು.

ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಹೆಚ್ಚುವರಿ ಉಪನಿರ್ದೇಶಕ ಡಾ. ಅಶೋಕ್ ರೇವಣಕರ್ ಮಾತನಾಡಿ, ಪ್ರಾಮಾಣಿಕ ಪ್ರಯತ್ನ ಮಾಡಿದರೆ ಉನ್ನತಿ ಸಾಧಿಸಬಹುದು. ಉನ್ನತ ಸ್ಥಾನಕ್ಕೆ ತಲುಪಿದಾಗ ಪ್ರತಿಭಾವಂತರನ್ನು ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಓದಿನ ಜತೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು, ಸಿಇಟಿ, ಜೆಇಇ, ನೀಟ್‌ನಲ್ಲಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸಲಾಯಿತು. ವೇದಿಕೆ ಅಧ್ಯಕ್ಷ ಜಯಪ್ಪ, ಅವನಿ, ಓಂಕಾರಪ್ಪ, ಹು.ಭಾ.ಅಶೋಕ್, ಡಾ. ದೇವೇಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net