ಧರ್ಮಸ್ಥಳ ಯೋಜನೆಯಿಂದ ಪರಿಸರ ಜಾಗೃತಿ

19 ANR 3
ಆಯನೂರಿನ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಿ.ಎಂ.ರವಿಕುಮಾರ್, ರಾಘವೇಂದ್ರ ಆಚಾರ್ಯ, ರೂಪಾ, ದಿನೇಶ್ ಇತರರಿದ್ದರು.
Published on

ಆಯನೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ಆಯನೂರಿನ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ ಆವರಣದಲ್ಲಿ ಪರಿಸರ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೇವಸ್ಥಾನದ ಅಧ್ಯಕ್ಷ ಬಿ.ಎಂ.ರವಿಕುಮಾರ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಕೃಷಿ ಅಧಿಕಾರಿ ಎಂ.ರಾಘವೇಂದ್ರ ಆಚಾರ್ಯ, ಪರಿಸರದ ಜಾಗೃತಿ ಹಾಗೂ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು, ಶ್ರದ್ಧಾಕೇಂದ್ರಗಳನ್ನು ಶುಚಿಯಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಮಾಹಿತಿ ನೀಡಿದರು.

ಒಕ್ಕೂಟದ ಅಧ್ಯಕ್ಷರಾದ ರೂಪಾ, ಶಾಂತಮ್ಮ, ದೇವಸ್ಥಾನ ಸಮಿತಿ ಸದಸ್ಯರಾದ ಅಣ್ಣಪ್ಪ, ಶಾಮಯ್ಯ, ವಲಯ ಮೇಲ್ವಿಚಾರಕಿ ಪೂರ್ಣಿಮಾ, ಕೃಷಿ ಯಂತ್ರಧಾರೆ ಮ್ಯಾನೇಜರ್ ದಿನೇಶ್, ಸೇವಾ ಪ್ರತಿನಿಧಿ ಶಶಿಕಲಾ, ಸೌಮ್ಯಾ, ಪ್ರೀತಿ ಉಪಸ್ಥಿತರಿದ್ದರು.

ಕಲ್ಲುಕೊಪ್ಪದ ತಿಪ್ಪೇಸ್ವಾಮಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ನಾಗರಾಜ್, ಮುಖ್ಯಶಿಕ್ಷಕ ಕೆ.ಪಿ.ಗಣಪತಿ, ಎಸ್‌ಡಿಎಂಸಿ ಅಧ್ಯಕ್ಷ ಪ್ರಸನ್ನಕುಮಾರ್, ಪರಿಸರ ಸೂಕ್ಷ್ಮ ವಲಯ ಸಮಿತಿ ಸದಸ್ಯ ಎ.ಲೋಕೇಶ್, ಪ್ರಗತಿಪರ ಕೃಷಿಕ ಸ್ವಾಮಿ ನಾಯಕ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net