

ಹೊಳೆಹೊನ್ನೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ಮಲೇರಿಯಾ ವಿರೋಧಿ ಮಾಸಾಚಾರಣೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗುಡದಪ್ಪ ಕಸಬಿ ಅವರು ಮಲೇರಿಯಾ, ಡೆಂೆ, ಚಿಕೂನ್ ಗುನ್ಯಾ, ಆನೆಕಾಲು ರೋಗ, ಮಿದುಳು ಜ್ವರ, ಜೀಕಾ ಹಾಗೂ ಕೀಟಜನ್ಯ ರೋಗಗಳ ಬಗ್ಗೆ ಮಾಹಿತಿ ನೀಡಿ, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮೇಲ್ವಿಚಾರಕ ನಾರಾಯಣ ಅವರು ಮಲೇರಿಯಾ ಜ್ವರ ಬಗ್ಗೆ ಹಾಗೂ ವೈದ್ಯೆ ರೂಪಿಣಿ ಅವರು ಡೆಂೆ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ದಂತ ವೈದ್ಯ ಮೋಹನ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಎಂ.ದೇವಾನಂದ್, ಲೋಕೇಶ್, ವೈದ್ಯೆ ಅಂಕಿತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದಮೂರ್ತಿ, ಆರೋಗ್ಯ ನಿರೀಕ್ಷಣಾಧಿಕಾರಿ ಸುನಿಲ್, ಹಾಲಸ್ವಾಮಿ, ಉಮೇಶ್, ರೇವಣಯ್ಯ, ನಾಗರಾಜ್, ನಾಗರಾಜಪ್ಪ, ಖಾಸಗಿ ಕ್ಲಿನಿಕ್ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.