ಪಠ್ಯೇತರ ಚಟುವಟಿಕೆಯೂ ಮುಖ್ಯ

7 anr 1
ಆಯನೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮವನ್ನು ಡಿಡಿಪಿಯು ಚಂದ್ರಪ್ಪ ಎಸ್.ಗುಂಡುಪಲ್ಲಿ ಉದ್ಘಾಟಿಸಿದರು. ಪಿ.ಕುಮಾರಪ್ಪ, ಕರಿಯಲ್ಲಪ್ಪ, ಮೋಸಿನ್, ಮಂಜುನಾಥ್ ಬಣಕಾರ್ ಇತರರಿದ್ದರು.
Published on

ಆಯನೂರು: ಶಿಕ್ಷಣದ ಜತೆ ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಸೇರಿದಂತೆ ಪಠ್ಯೇತರ ಚಟುವಟಿಕೆಯೂ ಮುಖ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡುಪಲ್ಲಿ ಹೇಳಿದರು.

ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಪಿ.ಕುಮಾರಪ್ಪ, ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ಅಧಿಕಾರಿ ಮಂಜುನಾಥ ಬಣಕಾರ, ನಿವೃತ್ತ ಉಪನ್ಯಾಸಕ ನರಸಿಂಹಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಕೆ.ಕರಿಯಲ್ಲಪ್ಪ, ಸದಸ್ಯರಾದ ಮೋಸಿನ್, ಪಂಚಾಯಿತಿ ಸದಸ್ಯ ಮಲ್ಲೇಶ್, ಉಪನ್ಯಾಸಕರಾದ ಎನ್.ಬಸವಣ್ಣಪ್ಪ, ಕೆ.ಜಿ.ಶಿಲ್ಪಾ, ಪಾರಿ ಪಾರಜ್ಜ, ಚನ್ನಪ್ಪ ಕೊಳ್ಳೇರ್, ಮಮತಾ, ನಾಗರತ್ನಾ ಹೆಗಡೆ, ಗೀತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net