ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಣೆ

2bdvt1
ಸಚಿವ ಮಧು ಬಂಗಾರಪ್ಪ ಜನ್ಮದಿನ ಹಿನ್ನೆಲೆಯಲ್ಲಿ ಭದ್ರಾವತಿ ಸಾರ್ವಜನಿಕ ಆಸ್ಪತ್ರೆ ಒಳರೋಗಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹಣ್ಣು ವಿತರಿಸಿದರು. ಬಿ.ಕೆ.ಶಿವಕುಮಾರ್, ಎಸ್.ಕುಮಾರ್, ಎಚ್.ಎಲ್.ಷಡಾಕ್ಷರಿ ಇತರರಿದ್ದರು.
Published on

ಭದ್ರಾವತಿ: ಸಚಿವ ಮಧು ಬಂಗಾರಪ್ಪ ಜನ್ಮದಿನದ ಹಿನ್ನೆಲೆಯಲ್ಲಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಗಾಂಧಿನಗರದ ಬಲಮುರಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮುಖಂಡ ಬಿ.ಕೆ.ಶಿವಕುಮಾರ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್.ಕುಮಾರ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಒಳಿತಿಗೆ ಪ್ರಾರ್ಥಿಸಲಾಯಿತು. ನಂತರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಿದರು.

ನಗರ ಘಟಕದ ಅಧ್ಯಕ್ಷ ಎಸ್.ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್.ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸದಸ್ಯರಾದ ಬಿ.ಟಿ.ನಾಗರಾಜ್, ಚನ್ನಪ್ಪ, ಅನುಸುಧಾ ಮೋಹನ್, ಮುರುಗೇಶ್, ಸುಕನ್ಯಾ, ರಮೇಶ್, ರವಿಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net