ಎಲ್ಲ ವರ್ಗದ ಜನರಿಗೂ ಗ್ಯಾರಂಟಿ

20 skp 2
ಶಿಕಾರಿಪುರದಲ್ಲಿ ಗ್ಯಾರಂಟಿ ಸಮಿತಿ ನೂತನ ಕಚೇರಿಯನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ನಾಗರಾಜ್ ಗೌಡ, ಗೋಣಿ ಮಾಲತೇಶ್, ಸಿ.ಎಸ್.ಚಂದ್ರಭೂಪಾಲ್, ಪಾರಿವಾಳದ ಶಿವರಾಂ, ನಗರದ ಮಹಾದೇವಪ್ಪ ಇತರರಿದ್ದರು.
Published on

ಶಿಕಾರಿಪುರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ಯುವಜನರಿಗೆ ಅನುಕೂಲವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದಲ್ಲಿ ನೂತನ ಗ್ಯಾರಂಟಿ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿ, ಪ್ರತಿ ವರ್ಷ 58 ಸಾವಿರ ಕೋಟಿ ರೂ. ವೆಚ್ಚದಲ್ಲಿ ಎಲ್ಲ ವರ್ಗದ ಜನರಿಗೂ ಯೋಜನೆಗಳು ತಲುಪುತ್ತಿವೆ. ಬಡವರು, ಹಿಂದುಳಿದವರು, ಕಾರ್ಮಿಕರ ಪರವಾಗಿ ಹಾಗೂ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಪಿ.ನಾಗರಾಜ್ ಗೌಡ ಮಾತನಾಡಿ, ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ವಿಶೇಷವಾಗಿ ಅನುಕೂಲ ಕಲ್ಪಿಸಿವೆ. ಸಮಿತಿ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರ ಬೆಂಬಲದಿಂದ ತಾಲೂಕಿನಲ್ಲಿ ಸಮರ್ಪಕ ಅನುಷ್ಠಾನ ಸಾಧ್ಯವಾಗಿದೆ ಎಂದು ತಿಳಿಸಿದರು.

ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳದ ಶಿವರಾಂ, ಭದ್ರಾ ಕಾಡಾ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಪುರಸಭೆ ಸದಸ್ಯ ಉಳ್ಳಿ ದರ್ಶನ್, ಯುವ ಮುಖಂಡ ರಾಘವೇಂದ್ರ ನಾಯಕ್, ಶಿವು ಹುಲ್ಮಾರ್, ಉಮೇಶ್, ಪರಶುರಾಮ್ ಗೌಳಿ, ಉಮೇಶ್, ಮಹೇಶ್, ಸಂತೋಷ್, ಸುರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net