ಸಾಲ ಮನ್ನಾ ಹಣ ನೀಡದಿದ್ದರೆ ಪಿಐಎಲ್ ದಾಖಲಿಸಲು ನಿರ್ಧಾರ: ಎಚ್.ಆರ್.ಬಸವರಾಜಪ್ಪ ಎಚ್ಚರಿಕೆ

IMG-20210118-WA0028
Published on

ಶಿವಮೊಗ್ಗ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮನ್ನಾ ಮಾಡಿರುವ ಸಾಲದ ಬಾಕಿ ಹಣವನ್ನು ವಾರದೊಳಗೆ ಬಿಡುಗಡೆ ಮಾಡಬೇಕು. ಇಲ್ಲವಾದರೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಸಿಎಂ ಇದ್ದಾಗ ಕೆಲವು ಷರತ್ತಿಗೊಳಪಟ್ಟು ರೈತರ ಸಾಲಮನ್ನಾ ಮಾಡಿದ್ದರು. ಪ್ರಸ್ತುತ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭಾಗಶಃ ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ 1.22 ಲಕ್ಷ ರೈತರಿಗೆ 350 ಕೋಟಿ ರೂ. ಹಣ ಬಿಡುಗಡೆ ಆಗಬೇಕಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅದರಲ್ಲಿ 65 ಸಾವಿರ ರೈತರ ಬ್ಯಾಂಕ್ ಖಾತೆ ನಂಬರ್, ಆಧಾರ್ ಹೊಂದಾಣಿಕೆಯಾಗಿದ್ದು, ಇವರಿಗೆ 200 ಕೋಟಿ ರೂ. ಬಿಡುಗಡೆ ಆಗಬೇಕಿದೆ. ಉಳಿದ 57 ಸಾವಿರ ರೈತರ ಬ್ಯಾಂಕ್ ಖಾತೆ ನಂಬರ್, ಆಧಾರ್, ಪಹಣಿಯಲ್ಲಿ ನ್ಯೂನತೆ ಇದ್ದು ಇದನ್ನು ಸರಿಪಡಿಸಿ 150 ಕೋಟಿ ರೂ. ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಹಿಂದಿನ ಸರ್ಕಾರದ ಸಾಲ ಮನ್ನಾ ಆದೇಶ ರದ್ದುಪಡಿಸಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಬೇಕು. ಇಲ್ಲ ಬಾಕಿ ಹಣ ಬಿಡುಗಡೆ ಮಾಡಿ ರೈತರನ್ನು ಸಾಲು ಮುಕ್ತಗೊಳಿಸಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net