

ಸೊರಬ: ರಾಷ್ಟ್ರಮಟ್ಟದಲ್ಲಿ ಹಿಂದಿ ಭಾಷೆ ಹೆಚ್ಚಾಗಿ ಬಳಕೆಯಲ್ಲಿದ್ದು, ಭಾಷಾ ಜ್ಞಾನ ಬೆಳೆಸಿಕೊಳ್ಳುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ನೇತ್ರಾವತಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಹಿಂದಿ ವಿಭಾಗದಿಂದ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದಿ ಭಾಷೆ ಅಧ್ಯಯನಕ್ಕೆ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಇದರಿಂದ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದು ತಿಳಿಸಿದರು.
ಹಿಂದಿ ವಿಭಾಗದ ಮುಖ್ಯಸ್ಥ ರಾಘವೇಂದ್ರ ನಾರಾಯಣಿ ಮಾತನಾಡಿ, ದೇಶದ ಕೇಂದ್ರಾಡಳಿತ ಪ್ರದೇಶ ಮತ್ತು ವಿವಿಧ ರಾಜ್ಯಗಳಲ್ಲಿ ಹಿಂದಿ ಭಾಷೆ ಮುಖ್ಯವಾಗಿದೆ. ಅಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಸಮರ್ಥರಾಗಿ ಎದುರಿಸಲು ಹಿಂದಿ ಭಾಷೆ ಮೇಲೆ ಹೊಂದಿರುವ ಆಸಕ್ತಿ ಕಾರಣವಾಗಿದೆ ಎಂದರು.
ಕುವೆಂಪು ವಿವಿ ಹಿಂದಿ ವಿಭಾಗದ ಮುಖ್ಯಸ್ಥೆ ನಾಗರತ್ನಾ, ಐಕ್ಯೂಎಸಿ ಸಂಚಾಲಕ ಡಾ. ಮೋಹನ್‌ಕುಮಾರ್, ಇತಿಹಾಸ ವಿಭಾಗದ ರವಿ ಕಲ್ಲಂಬಿ, ಸಮಾಜಶಾಸ ವಿಭಾಗದ ರಾಜಶೇಖರ ಗೌಡ, ಸಬೀಹಾ, ಮುಸ್ಕಾನ್ ಇತರರಿದ್ದರು.