ಗ್ರಾಮದ ಅಭಿವೃದ್ಧಿಗೆ ಸಹಕಾರಿ

6ತ್ಯಾಗರ್ತಿ
ತ್ಯಾಗರ್ತಿ ಸಮೀಪದ ಹೊಸಂತೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹೈಮಾಸ್ಕ್ ಬೀದಿ ದೀಪ ಉದ್ಘಾಟಿಸಿದರು. ಪ್ರಶಾಂತ್, ಸೋಮಶೇಖರ್ ಲಾವಿಗೆರೆ ಇತರರಿದ್ದರು.
Published on

ತ್ಯಾಗರ್ತಿ: ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಮೂಲ ಸೌಕರ್ಯ ಉತ್ತಮಪಡಿಸಲು ಆದರ್ಶ ಗ್ರಾಮ ಯೋಜನೆ ಜಾರಿಗೊಳಿಸಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಹಿರೇಬಿಲಗುಂಜಿ ಗ್ರಾಪಂ ವ್ಯಾಪ್ತಿ ಹೊಸಂತೆಯಲ್ಲಿ ಆದರ್ಶ ಗ್ರಾಮ ಯೋಜನೆಯಡಿ 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ 12 ಹೈಮಾಸ್ಟ್ ಬೀದಿ ದೀಪ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಯೋಜನೆಯಿಂದ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಕಾಂಕ್ರೀಟ್ ರಸ್ತೆ, ಬಾಕ್ಸ್ ಚರಂಡಿ, ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಸ್ವಚ್ಛತೆ ಕಾಪಾಡುವಲ್ಲಿ ಹಾಗೂ ಬೆಳಕು ನೀಡಲು ಯೋಜನೆ ರೂಪಿಸಲಾಗಿದೆ. ಗ್ರಾಮದ ಅಭಿವೃದ್ಧಿ ಕಾಮಗಾರಿಗಳಿಗೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

ಹಿರೇಬಿಲಗುಂಜಿ ಗ್ರಾಪಂ ಅಧ್ಯಕ್ಷ ಪ್ರಶಾಂತ್ ಖಂಡೋಜಿ, ಪಿಡಿಒ ಶೇಖರಪ್ಪ, ಪ್ರಮುಖರಾದ ಸೋಮಶೇಖರ್ ಲಾವಿಗೆರೆ, ಗಣಪತಿ, ಯೋಗೇಶ್, ಜಗದೀಶ್ ಸಂಪಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net