ನಿರಂತರ ಪರಿಶ್ರಮದಿಂದ ಉನ್ನತ ಸಾಧನೆ

14 HHR P 07
ಮಲ್ಲಾಪುರದ ಶ್ರೀ ಮಲ್ಲೇಶ್ವರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಧರ್ಮಸ್ಥಳ ಸಂಘದ ಯೋಜನಾಧಿಕಾರಿ ಅಜಯ್‌ಕುಮಾರ್ ಉದ್ಘಾಟಿಸಿದರು. ತಿಪ್ಪೇರುದ್ರಪ್ಪ, ರತ್ನಮ್ಮ, ಎಂ.ಎಸ್.ಶಿವಪ್ಪ ಇತರರಿದ್ದರು.
Published on

ಹೊಳೆಹೊನ್ನೂರು: ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಅಜಯ್‌ಕುಮಾರ್ ಹೇಳಿದರು.

ಮಲ್ಲಾಪುರದ ಶ್ರೀ ಮಲ್ಲೇಶ್ವರ ಪ್ರೌಢಶಾಲೆಯಲ್ಲಿ ಗ್ರಾಮಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ತರಬೇತಿ ಸಮಾರೋಪದಲ್ಲಿ ಮಾತನಾಡಿ, ತಾಲೂಕಿನ 10 ಶಾಲೆಗಳಲ್ಲಿ ಉಚಿತ ತರಬೇತಿ ನೀಡಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪ್ರಮುಖ ಹಂತ. ವಿದ್ಯಾರ್ಥಿಗಳು ಆರಂಭದಿಂದಲೇ ಹೆಚ್ಚು ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿ ಸಂಘದ ಸದಸ್ಯರ 350 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಗ್ರಾಮಾಂತರದ 6 ಸರ್ಕಾರಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗಿದೆ. ಗಣಿತ, ವಿಜ್ಞಾನ ವಿಷಯಗಳು ಕಷ್ಟ ಎಂದು ಭಾವಿಸುವುದು ತಪ್ಪು. ಗುರಿ ಸಾಧಿಸಲು ನಿರಂತರ ಶ್ರಮಿಸಬೇಕು ಎಂದರು.

ಮುಖ್ಯಶಿಕ್ಷಕ ತಿಪ್ಪೇರುದ್ರಪ್ಪ, ಶಾಲಾಭಿವೃದ್ಧಿ ಸಮಿತಿ ಎಂ.ಎಸ್.ಶಿವಪ್ಪ, ಒಕ್ಕೂಟಗಳ ಅಧ್ಯಕ್ಷೆ ರತ್ನಮ್ಮ, ಮೇಲ್ವಿಚಾರಕಿ ವಂದನಾ, ಸೇವಾ ಪ್ರತಿನಿಧಿ ಶಶಿಕುಮಾರ್, ಎಸ್.ಜಿ.ಬಸವರಾಜಪ್ಪ, ಮಲ್ಲೇಶಪ್ಪ, ರವಿನಾಯ್ಕ, ಶೇಖರಪ್ಪ, ಪಿ.ಎಸ್.ನಾಗರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net