ಗಮಕ ಸಾಧಕ ಎಚ್‌ಆರ್‌ಕೆ ಪಂಚಭೂತಗಳಲ್ಲಿ ಲೀನ

hrk
Published on

ಶಿವಮೊಗ್ಗ: ಪದ್ಮಶ್ರೀ ಪುರಸ್ಕೃತ ಗಮಕಿ ಎಚ್.ಆರ್.ಕೇಶವಮೂರ್ತಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಹೊಸಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು. ಪೊಲೀಸ್ ಇಲಾಖೆಯಿಂದ ಕುಶಾಲುತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಉಪಸ್ಥಿತರಿದ್ದರು. ಮತ್ತೂರು ಗ್ರಾಮಸ್ಥರ ಪರವಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್, ಆರ್‌ಎಸ್‌ಎಸ್‌ನ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪುಷ್ಪ ನಮನ ಸಲ್ಲಿಸಿದರು.

ಮೇಯರ್ ಎಸ್.ಶಿವಕುಮಾರ್ ನೇತೃತ್ವದಲ್ಲಿ ಪಾಲಿಕೆಯ ಸದಸ್ಯರು ಗಮಕ ಸಾಧಕನ ಅಂತಿಮ ದರ್ಶನ ಪಡೆದು ಪುಷ್ಪನಮನ ಸಲ್ಲಿಸಿದರು. ಉಪಮೇಯರ್ ಲಕ್ಷ್ಮೀ ಶಂಕರನಾಯ್ಕ, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಸದಸ್ಯರಾದ ಸುನೀತಾ ಅಣ್ಣಪ್ಪ, ಸುರೇಖಾ ಮುರಳೀಧರ್, ಪ್ರಭಾಕರ್, ಅನಿತಾ ರವಿಶಂಕರ್ ಮೃತರ ಅಂತಿಮ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net