ಪರಿಶ್ರಮ ವಹಿಸಿದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ

5sor2
ಸೊರಬದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರದಲ್ಲಿ ಪ್ರಾಚಾರ್ಯೆ ಡಾ. ನೇತ್ರಾವತಿ ಮಾತನಾಡಿದರು. ರವಿ ಕಲ್ಲಂಬಿ, ವಂದನಾ, ಆನಂದರಾವ್, ನೇಂದ್ರಪ್ಪ ಇದ್ದರು.
Published on

ಸೊರಬ: ಪದವಿ ಹಂತದಲ್ಲಿ ಪರಿಶ್ರಮ ವಹಿಸಿ ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ನೇತ್ರಾವತಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಪ್ಲೇಸ್‌ಮೆಂಟ್ ಸೆಲ್‌ನಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ ಪ್ರಗತಿ ಪೋಷಕ್ ತರಬೇತಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಅಧ್ಯಯನ ಕಾರ್ಯಾಗಾರದಲ್ಲಿ ಮಾತನಾಡಿ, ಪದವಿ ನಂತರದ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಉದ್ಯೋಗ ಅವಕಾಶಗಳ ಮಾಹಿತಿಯನ್ನು ವಿದ್ಯಾರ್ಥಿಗಳು ಹೊಂದಿರಬೇಕು ಎಂದು ತಿಳಿಸಿದರು.

ಉಪನ್ಯಾಸಕ ರವಿ ಕಲ್ಲಂಬಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗೆ ಯುವಜನರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ಲೇಸ್‌ಮೆಂಟ್ ಸೆಲ್ ಸಂಚಾಲಕ ಡಾ. ಕಿರಣ್‌ಕುಮಾರ್ ದೊಡ್ಡಮನಿ, ಪ್ರಗತಿ ಪೋಷಕ್ ತರಬೇತಿ ಸಂಸ್ಥೆಯ ವಂದನಾ, ಆನಂದ ರಾವ್, ಸಹಾಯಕ ಪ್ರಾಧ್ಯಾಪಕ ನೇಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net