ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಕಡಿದಾಳ್ ಗೋಪಾಲ್ ಎಚ್ಚರಿಕೆ

IMG-20201126-WA0016_2
Published on

ಶಿವಮೊಗ್ಗ: ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕಡಿದಾಳ್ ಗೋಪಾಲ್ ಸರ್ಕಾರಕ್ಕೆಒತ್ತಾಯಿಸಿದರು. ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು ನಿಗಮಕ್ಕೆ ವಾರ್ಷಿಕವಾಗಿ ಒಂದು ಸಾವಿರ ಕೋಟಿ ರೂ. ಮೀಸಲಿಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಶೀಘ್ರವೇ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲಾಗುವುದು. ಬೇಡಿಕೆಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂಬಂಧ ಈಗಾಗಲೇ ಡಿಸಿಎಂ ಅಶ್ವಥನಾರಾಯಣ್ ಅವರನ್ನು ಭೇಟಿ ಮಾಡಿದ್ದೇವೆ. ನಿಗಮ ಮಾಡುವುದು ೧೦ ವರ್ಷಗಳ ಬೇಡಿಕೆಯಾಗಿದೆ. ಇದರಿಂದ ಒಕ್ಕಲಿಗ ಸಮಾಜಕ್ಕೆ ಶಕ್ತಿ ತುಂಬಿದಂತೆ ಅಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net