ನಾಡಿಗೆ ಕೆಂಪೇಗೌಡರ ಕೊಡುಗೆ ಅಪಾರ

31sor2
ಸೊರಬದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರುದ್ರಪ್ಪ ಕಡ್ಲೇರ್ ಉದ್ಘಾಟಿಸಿದರು. ಆರ್.ಪುಷ್ಪಾ, ಮಂಜಪ್ಪ, ಜಯಶೀಲ ಗೌಡ, ಎಂ.ಸುರೇಶಪ್ಪ, ಡಾ. ನೇತ್ರಾವತಿ ಇತರರಿದ್ದರು.
Published on

ಸೊರಬ: ನಾಡಪ್ರಭು ಕೆಂಪೇಗೌಡರ ಆದರ್ಶ ಚಿಂತನೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ರುದ್ರಪ್ಪ ಕಡ್ಲೇರ್ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಬೆಂಗಳೂರು ನಿರ್ಮಾಣದ ಕನಸು ಕಂಡು ನಾಡಿಗೆ ಅಮೂಲ್ಯ ಕೊಡುಗೆಗಳನ್ನು ಕೆಂಪೇಗೌಡರು ನೀಡಿದ್ದಾರೆ. ವಿದ್ಯಾರ್ಥಿಗಳು ಜೀವನದಲ್ಲಿ ಸಂಸ್ಕಾರಯುತ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಬಿಇಒ ಆರ್.ಪುಷ್ಪಾ ಮಾತನಾಡಿ, ಕೆಂಪೇಗೌಡರ ಚರಿತ್ರೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ರಾಜ್ಯ ಸರ್ಕಾರ ವಿವಿಧ ಸ್ಪರ್ಧೆಗಳನ್ನು ನಡೆಸುತ್ತಿದೆ. ಸಕ್ರಿಯವಾಗಿ ಭಾಗವಹಿಸಿ ಕೆಂಪೇಗೌಡರ ಹೋರಾಟ ಮತ್ತು ಅವರ ಆದರ್ಶಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು. ತಾಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜಪ್ಪ ಬನದಕೊಪ್ಪ ಮಾತನಾಡಿ, ಬೆಂಗಳೂರು ನಿರ್ಮಾಣದ ರೂವಾರಿ ಕೆಂಪೇಗೌಡರ ಅಭಿವೃದ್ಧಿ ಚಿಂತನೆ ಮತ್ತು ನಾಡು ಕಟ್ಟಲು ಶ್ರಮಿಸಿದ ಹೋರಾಟ ಸದಾ ಸ್ಮರಣೀಯ ಎಂದು ಹೇಳಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲ ಗೌಡ, ಸಂಜೀವ್‌ಕುಮಾರ್, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಸುರೇಶಪ್ಪ, ಪದವಿ ಕಾಲೇಜು ಪ್ರಾಚಾರ್ಯೆ ಡಾ. ನೇತ್ರಾವತಿ, ದಯಾನಂದ ಕಲ್ಲೇರ, ಡಾ. ಕೆ.ಸಿ.ಶ್ರೀಕಾಂತ್, ಲಿಂಗರಾಜ್ ಒಡೆಯರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net