

ಹೊಳೆಹೊನ್ನೂರು: ಹೊಳೆಬೈರನಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರಸ್ವಾಮಿ ಕೆಂಡಾರ್ಚನೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಉತ್ಸವ ಮೂರ್ತಿಯನ್ನು ವೀರಗಾಸೆ ಪ್ರದರ್ಶನ, ಡೋಲು, ಭಜಂತ್ರಿಯೊಂದಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಕೆಂಡಾರ್ಚನೆ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಹಿರೇಮಠದ ಕೇದಾರಲಿಂಗ ಶ್ರೀ ಶಾಂತವೀರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ರುದ್ರಾಭಿಷೇಕ, ಪುಷ್ಪಾಲಂಕಾರ, ಕುಂಭಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.
ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಗ್ರಾಮಸ್ಥರಾದ ಎಚ್.ಬಿ.ರವಿಕುಮಾರ್, ವಿ.ಕುಮಾರ ನಾಯ್ಡು, ದಾನೇಶ್, ಮಂಜುನಾಥ್, ಲೋಕಯ್ಯ, ಬಸವರಾಜಪ್ಪ, ದಿಲೀಪ್, ರುದ್ರಪ್ಪ ಹಾಗೂ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.