ಕಾಗೋಡು ತಿಮ್ಮಪ್ಪಗೆ ಕುವೆಂಪು ವಿವಿ ಆಹ್ವಾನ

18sgr1
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೆಟ್ ಪದವಿ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಡಾ. ಶರತ್ ಅನಂತಮೂರ್ತಿ, ಡಾ. ಎ.ಎಲ್.ಮಂಜುನಾಥ್, ಪ್ರೊ. ಗೋಪಿನಾಥ್ ಇತರರಿದ್ದರು.
Published on

ಸಾಗರ: ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಲಾಗಿದೆ. ವಿಶ್ವವಿದ್ಯಾಲಯ ಕುಲಪತಿ ಡಾ. ಶರತ್ ಅನಂತಮೂರ್ತಿ ಅವರು ಕಾಗೋಡು ತಿಮ್ಮಪ್ಪ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಿದರು.

ಜ.22ರ ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡುವರು. ಕಾಗೋಡು ತಿಮ್ಮಪ್ಪ ಅವರಿಗೆ ಜ.22ರಂದು ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲೂ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ. ಒಂದೇ ದಿನ ಎರಡು ಗೌರವ ಡಾಕ್ಟರೇಟ್ ಪಡೆಯುತ್ತಿರುವ ಹೆಗ್ಗಳಿಕೆ ಕಾಗೋಡು ತಿಮ್ಮಪ್ಪ ಅವರದ್ದಾಗಿದೆ.

ತಿಮ್ಮಪ್ಪ ಅವರಿಗೆ ಆಹ್ವಾನಿಸುವ ಸಂದರ್ಭದಲ್ಲಿ ಡಾ. ಎ.ಎಲ್.ಮಂಜುನಾಥ್, ಪ್ರೊ. ಗೋಪಿನಾಥ್, ಲಕ್ಷ್ಮೀಕಾಂತ್, ಜನಾರ್ದನ್, ಅಬ್ದುಲ್ ಹಮೀದ್, ತಾರಾಮೂರ್ತಿ, ಗಿರೀಶ್ ಕೋವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net