ಶ್ರೀ ಮಾರಿಯಮ್ಮ ದೇವಿಗೆ ಲಕ್ಷ್ಮೀ ಅಲಂಕಾರ

1bdvt3
ಭದ್ರಾವತಿಯ ಶ್ರೀ ಮಾರಿಯಮ್ಮ ದೇವಿಗೆ ಶ್ರೀ ಲಕ್ಷ್ಮೀ ಅಲಂಕಾರ ಮಾಡಿರುವುದು.
Published on

ಭದ್ರಾವತಿ: ನಗರದ ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ, ಪೂಜಾ ವಿಧಿವಿಧಾನಗಳು ನೆರವೇರಿದವು.

ಭದ್ರಾ ನದಿಯಿಂದ ಶಕ್ತಿ ಕರಗ ತರುವುದು ಮತ್ತು ಅಗ್ನಿಕುಂಡ ತ್ರಿಶೂಲ ಮುದ್ರೆಯೊಂದಿಗೆ ದೇವಸ್ಥಾನಕ್ಕೆ ಬಂದು ಸೇರುವ ಕಾರ್ಯಕ್ರಮ ನೆರವೇರಿತು. ಈ ಬಾರಿ ಅಮ್ಮನವರಿಗೆ 100, 50, 20 ಹಾಗೂ 10 ರೂ. ಮುಖಬೆಲೆಯ ನೋಟು ಮತ್ತು ಚಿನ್ನಾಭರಣಗಳಿಂದ ಶ್ರೀ ಲಕ್ಷ್ಮೀ ಅಲಂಕಾರ ಮಾಡಲಾಗಿತ್ತು.

ದೇವಸ್ಥಾನದ ಹೊರಭಾಗದಲ್ಲಿ ತಿರುಪತಿ ಶ್ರೀ ವೆಂಕಟೇಶ್ವರಸ್ವಾಮಿ ಹಾಗೂ ಪದ್ಮಾವತಿ ಅಮ್ಮನವರನ್ನು ಕಬ್ಬಿನ ಜೊಲ್ಲೆ, ಬಾಳೆ ಗೊನೆಗಳಿಂದ ಅಲಂಕೃತಗೊಳಿಸಲಾಗಿತ್ತು. ಬೆಳಗಿನ ಜಾವ ಪೊಂಗಲ್ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದರು. ಸಂಜೆ ಶ್ರೀ ಮಾರಿಯಮ್ಮ ದೇವಿ ರಾಜಬೀದಿ ಉತ್ಸವ ಮತ್ತು ಮಹಾಮಂಗಳಾರತಿ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net