ಪರಿಸರ ಸ್ವಚ್ಛತೆ ಕಾಪಾಡುವುದು ಅವಶ್ಯ

25bdvt2
ಭದ್ರಾವತಿಯ ಆರ್‌ಎಎ್ 97 ಬೆಟಾಲಿಯನ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ ಉದ್ಘಾಟಿಸಿದರು. ಡಾ. ಎಂ.ವಿ.ಅಶೋಕ್, ಡಾ. ಚಂದ್ರಶೇಖರ್, ಕಮಲೇಶ್‌ಕುಮಾರ್ ಇತರರಿದ್ದರು.
Published on

ಭದ್ರಾವತಿ: ಪರಿಸರ ಸ್ವಚ್ಛತೆ ಕಾಪಾಡುವುದರಿಂದ ಅನೇಕ ರೀತಿ ರೋಗಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು.

ಮಿಲಿಟರಿ ಕ್ಯಾಂಪಿನಲ್ಲಿರುವ ಆರ್‌ಎಎ್ 97 ಬೆಟಾಲಿಯನ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೊಳ್ಳೆಗಳ ನಿಯಂತ್ರಣದಿಂದ ರೋಗ ಕಡಿವಾಣ ಸಾಧ್ಯ. ಮುನ್ನೆಚ್ಚರಿಕೆ ಕ್ರಮವಾಗಿ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾರ್ವಜನಿಕರು ಕಾಯಿಲೆಗಳ ಬಗ್ಗೆ ಜಾಗೃತಿ ಹೊಂದುವ ಅಗತ್ಯವಿದೆ. ಮಲೇರಿಯಾ ನಿರ್ಮೂಲನೆ ನಮ್ಮ ಗುರಿ ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ.ಅಶೋಕ್ ಮಾತನಾಡಿ, ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಉತ್ತಮ ಪರಿಸರ ಕಾಪಾಡಿಕೊಳ್ಳಲು ನಾವೆಲ್ಲರೂ ಪ್ರಯತ್ನಿಸಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ಕಾಗದ ನಗರ, ಅಂಡರ್‌ಬ್ರಿಡ್ಜ್, ರಂಗಪ್ಪ ವೃತ್ತ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಪ್ರಮುಖರಾದ ಡಾ. ಚಂದ್ರಶೇಖರ್, ಕಮಲೇಶ್‌ಕುಮಾರ್, ಸಚಿನ್, ನಾರಾಯಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net