ಆಯುಷ್ಮಾನ್ ಯೋಜನೆಗೆ ಸದ್ಬಳಕೆ ಮಾಡಿಕೊಳ್ಳಿ

5bdvt2
ಭದ್ರಾವತಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್‌ಗೆ ನೋಂದಣಿ ಅಭಿಯಾನಕ್ಕೆ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ಜಿ.ಆನಂದಕುಮಾರ್, ಮಂಗೋಟೆ ರುದ್ರೇಶ್, ಮಧುಕರ್ ಕಾನಿಟ್ಕರ್ ಇತರರಿದ್ದರು.
Published on

ಭದ್ರಾವತಿ: ಜನರಿಗೆ ಆರೋಗ್ಯ ಸೌಲಭ್ಯ ಒದಗಿಸುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರತಿಯೊಬ್ಬರೂ ಬಳಸಿಕೊಳ್ಳಬೇಕು ಎಂದು ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಹೊಸಮನೆ ಮುಖ್ಯರಸ್ತೆಯಲ್ಲಿರುವ ಬಿಜೆಪಿ ಮುಖಂಡ ಜಿ.ಆನಂದ್‌ಕುಮಾರ್ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಜನರ ಆರೋಗ್ಯದ ಬಗ್ಗೆ ಕಾಳಜಿ ಹೊತ್ತು ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವುದು ಶ್ಲಾಘನೀಯ. ವೃದ್ಧಾಪ್ಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಮಹಿಳೆ ಹಾಗೂ ಪುರುಷರು ಹೆಸರು ನೋಂದಾಯಿಸಿ ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಯೋಜನೆಗಳನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಕ್ಷೇತ್ರದ ಪ್ರತಿ ವ್ಯಕ್ತಿಗೂ ತಲುಪಿಸುವ ಕೆಲಸ ಮಾಡುತ್ತಿರುವುದು ನಾವೆಲ್ಲರೂ ಮೆಚ್ಚುವಂತಹ ಕೆಲಸ ಎಂದರು.

ಕಾರ್ಯಕ್ರಮದ ಮೊದಲ ದಿನ 120ಕ್ಕೂ ಹೆಚ್ಚು ಜನರು ನೋಂದಾಯಿಸಿದರು. ಸೋಮವಾರವೂ ನೋಂದಣಿ ಇರಲಿದೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಆನಂದಕುಮಾರ್, ಆರ್‌ಎಸ್‌ಎಸ್ ಹಿರಿಯ ಮುಖಂಡ ಮಧುಕರ್ ಕಾನಿಟ್ಕರ್, ಮುಖಂಡರಾದ ಮಂಗೋಟೆ ರುದ್ರೇಶ್, ಶ್ರೀನಾಥ್ ಆಚಾರ್, ಉದಯಕುಮಾರ್, ಮೈಲಾರಪ್ಪ, ಸುಬ್ರಹ್ಮಣ್ಯ, ಮಂಜುಳಾ, ಶಕುಂತಲಾ, ಕುಮಾರಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net