

ಶಿರಾಳಕೊಪ್ಪ: ಪಿಯು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ಸಿಇಟಿ, ನೀಟ್ ಪರೀಕ್ಷೆ ತರಬೇತಿಯನ್ನು ಆನ್ಲೈನ್ ಮೂಲಕ ನೀಡುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಗೆ ಭೇಟಿ ನೀಡಿ ಮಾತನಾಡಿ, ಪ್ರಸಕ್ತ ವಷರ್ 25 ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದು ಶಿಕ್ಷಣದ ಜತೆಗೆ ಸಂಬಂಧಿಸಿದ ಪುಸ್ತಕಗಳನ್ನು ಕೊಡಲಾಗುತ್ತಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಅಗತ್ಯ ವ್ಯವಸ್ಥೆ ಮಾಡುತ್ತಿದ್ದು ಉತ್ತಮ ಫಲಿತಾಂಶ ಪಡೆಯಬೇಕು ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಶಿಕ್ಷಣ ಪಡೆದಿರುವ ಸರ್ಕಾರಿ ಪ್ರೌಢಶಾಲೆಯನ್ನು ಅವರ ಸವಿನೆನಪಿಗಾಗಿ ಕೆಪಿಎಸ್ ಶಾಲೆಯನ್ನಾಗಿಸಿ ಅಭಿವೃದ್ಧಿ ಮಾಡಲಾಗುವುದು. ಈ ಶಾಲೆಯಲ್ಲಿ ಎಲ್ಕೆಜಿಯಿಂದ 12ನೇ ತರಗತಿವರೆಗೆ ಶಿಕ್ಷಣ ನೀಡಲಾಗುವುದು ಎಂದರು.
ಸ್ಥಳೀಯರು, ಕಾರ್ಯಕರ್ತರು ಮನವಿ ಸಲ್ಲಿಸಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರನಗೌಡ, ನಗರ ಅಧ್ಯಕ್ಷ ಸಯ್ಯದ್ ಬಿಲಾಲ್, ಪುರಸಭೆ ಅಧ್ಯಕ್ಷೆ ಮಮತಾ ನಿಂಗಪ್ಪ, ಉಪಾಧ್ಯಕ್ಷ ಮುದಸೀರ್, ಸ್ಥಾಯಿ ಸಮಿತಿ ಅಧ್ಯಕ್ಷ ಮಹಬಲೇಶ್, ಸದಸ್ಯರಾದ ರಾಘವೇಂದ್ರ, ನಿರ್ಮಲಾ ಶಿವಾನಂದ ಸ್ವಾಮಿ, ತೇಜಪ್ಪ ತಡಗಣಿ, ಮುಖ್ಯಶಿಕ್ಷಕ ನಾಗರಾಜಪ್ಪ, ಎಸ್ಡಿಎಂಸಿ ಅಧ್ಯಕ್ಷ ಬಸವರಾಜಪ್ಪ, ಶಿಕ್ಷಕರು ಇದ್ದರು.