ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ

8sor5
ಸೊರಬದಲ್ಲಿ ಹಾಪ್‌ಕಾಮ್ಸ್ ಮಳಿಗೆಯನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಕೆ.ವಿ.ಗೌಡ, ಕೆ.ಪಿ.ರುದ್ರಗೌಡ, ದಯಾನಂದ ಗೌಡ ಇತರರಿದ್ದರು.
Published on

ಸೊರಬ: ಹಣ್ಣು, ತರಕಾರಿಗಳನ್ನು ಮಧ್ಯವರ್ತಿಗಳಿಲ್ಲದೆ ಮಾರಾಟ ಮಾಡಲು ಹಾಗೂ ಸಾರ್ವಜನಿಕರು ರಿಯಾಯಿತಿ ದರದಲ್ಲಿ ಖರೀದಿಸಲು ಹಾಪ್‌ಕಾಮ್ಸ್ ಮಳಿಗೆಗಳನ್ನು ತೆರೆಯಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ನಂದಿನಿ ಮಿಲ್ಕ್ ಪಾರ್ಲರ್ ಸಮೀಪ ಹಾಪ್‌ಕಾಮ್ಸ್‌ನ ಹಣ್ಣು-ತರಕಾರಿ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿ, ಹಾಪ್‌ಕಾಮ್ಸ್ ಮಳಿಗೆಗಳಲ್ಲಿ ಸಾರ್ವಜನಿಕರು ವ್ಯವಹಾರ ಮಾಡುವುದರಿಂದ ಸರ್ಕಾರದ ಆದಾಯ ಹೆಚ್ಚಾಗುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ.ವಿ.ಗೌಡ ಮಾತನಾಡಿ, ಲಾಭದಲ್ಲಿರುವ ರಾಜ್ಯದ ಹಾಪ್‌ಕಾಮ್ಸ್‌ಗಳ ಪೈಕಿ ಶಿವಮೊಗ್ಗ ಕೂಡ ಒಂದು. ತಾಲೂಕಿನಲ್ಲಿ ಮೊದಲ ಬಾರಿಗೆ ಹಣ್ಣು, ತರಕಾರಿಯ ಹಾಪ್‌ಕಾಮ್ಸ್ ಮಳಿಗೆ ಆರಂಭಿಸಲಾಗಿದೆ. ಹೊಸಪೇಟೆ ಹಕ್ಕಲು ಬಡಾವಣೆ, ಆನವಟ್ಟಿ, ಜಡೆಯಲ್ಲಿ ಮಳಿಗೆ ತೆರೆಯುವ ಚಿಂತನೆ ಇದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಪಿ.ರುದ್ರಗೌಡ, ಶಿಮುಲ್ ನಿರ್ದೇಶಕ ದಯಾನಂದ ಗೌಡ, ಎಚ್.ಗಣಪತಿ, ಅಣ್ಣಪ್ಪ, ತಬಲಿ ಬಂಗಾರಪ್ಪ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಪುರಸಭೆ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net