ಜನರಿಗೆ ಉತ್ತಮ ಸೇವೆ ಒದಗಿಸಿ

20sor6
ಸೊರಬದ ರಂಗಮಂದಿರದಲ್ಲಿ ಆಯೋಜಿಸಿದ್ದ ಕಂದಾಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಅವರನ್ನು ಸನ್ಮಾನಿಸಲಾಯಿತು. ವಿ.ಎಲ್.ಶಿವಪ್ರಸಾದ್, ವೀರೇಶ್ ಕುಮಾರ್, ಮಂಜುಳಾ ಬಿ.ಹೆಗಡಾಳ್, ಶಶಿಧರ, ಪ್ರಭು ಮೇಸ್ತ್ರಿ ಇತರರಿದ್ದರು.
Published on

ಸೊರಬ: ಸದಾ ಜನರ ಸಂಪರ್ಕದಲ್ಲಿ ಇರುವ ಕಂದಾಯ ಇಲಾಖೆ ಸಿಬ್ಬಂದಿ ಜನರಿಗೆ ಉತ್ತಮ ಸೇವೆ ಒದಗಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಕಂದಾಯೋತ್ಸವದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಮತ್ತು ಕಂದಾಯ ಇಲಾಖಾ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ. ಈ ನಿಟ್ಟಿನಲ್ಲಿ ನೌಕರರು ಮಾತೃ ಹೃದಯದಿಂದ ಜನಸೇವೆ ಮಾಡಬೇಕು. ಇಲಾಖೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜನಪ್ರತಿನಿಧಿಗಳು ಹಾಗೂ ನೌಕರ ವರ್ಗ ಮನಸ್ಸು ಮಾಡಿದರೆ ಜನಕ್ಕೆ ಒಳ್ಳೆಯ ಕೆಲಸ ಮಾಡಬಹುದು ಎಂದರು.

ಕಂದಾಯ ಇಲಾಖಾ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿ.ಎಲ್.ಶಿವಪ್ರಸಾದ್, ಸಾಗರ ಎಸಿ ವೀರೇಶ್‌ಕುಮಾರ್, ತಹಸೀಲ್ದಾರ್ ಮಂಜುಳಾ ಬಿ. ಹೆಗಡಾಳ್, ತಾಪಂ ಇಒ ಶಶಿಧರ, ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಉಪಾಧ್ಯಕ್ಷೆ ಶ್ರೀರಂಜನಿ ಪ್ರವೀಣ್‌ಕುಮಾರ್, ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷ ಎಸ್.ಎಚ್.ವಿನಯ, ಪ್ರಧಾನ ಕಾರ್ಯದರ್ಶಿ ಶ್ರೀಶೈಲಾ ಬಗಲಿ, ಕ್ರೀಡಾ ಕಾರ್ಯದರ್ಶಿ ಜಂಗಪ್ಪಗೌಡ ಬಿರಾದರ, ಶ್ರೀಕಾಂತ ವಡ್ಡರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net