ಭಾರತ್ ಬಂದ್ ಬೆಂಬಲಿಸಿ ಕೃಷಿ ಕಾಯ್ದೆ, ಎಫ್‌ಐಆರ್ ಪ್ರತಿಗೆ ಶಿವಮೊಗ್ಗದಲ್ಲಿ ಬೆಂಕಿ

IMG-20210326-WA0026
Published on

ಶಿವಮೊಗ್ಗ: ರೈತ ವಿರೋಧಿ ಕಾಯ್ದೆಗಳ ವಿರುದ್ಧ ಭಾರತ್ ಬಂದ್ ಬೆಂಬಲಿಸಿ ಭಾರತೀಯ ಕಿಸಾನ್ ಸಂಯುಕ್ತ ಮೋರ್ಚಾ ಐಕ್ಯ ಒಕ್ಕೂಟದ ಮುಖಂಡರು ಶುಕ್ರವಾರ ಕೃಷಿ ಕಾಯ್ದೆಗಳ ಪ್ರತಿ ಹಾಗೂ ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧ ದಾಖಲಾದ ಎಫ್‌ಐಆರ್ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಿದರು.
ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಕಿವಿ ಕೇಳುತ್ತಿಲ್ಲ. ಭಂಡತನ ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಮಹಾವೀರ ವೃತ್ತದಲ್ಲಿ ಪ್ರತಿಗಳಿಗೆ ಬೆಂಕಿ ಹೆಚ್ಚಿದರು.
ಮೂರು ಕೃಷಿ ಕಾಯ್ದೆಗಳು ರೈತರ ಪರವಾಗಿವೆ ಎಂದು ನಂಬಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಆದರೆ ಆ ಕಾಯ್ದೆಗಳು ರೈತರಿಗೆ ಮರಣ ಶಾಸನದಂತಾಗಿವೆ. ಹಾಗಾಗಿ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net