ಗುಣಮಟ್ಟದ ಶಿಕ್ಷಣ ಕಲ್ಪಿಸಲು ಯೋಜನೆ

10sgr2
ಸಾಗರದ ಇಂದಿರಾಗಾಂದಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ವಿವಿಧ ಘಟಕದ ಚಟುವಟಿಕೆಗಳ ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಡಾ. ರಾಜೇಶ್ವರಿ, ಎಚ್.ಕೆ.ನಾಗಪ್ಪ, ಗಣಪತಿ ಮಂಡಗಳಲೆ, ಮಧುಮಾಲತಿ ಇತರರಿದ್ದರು.
Published on

ಸಾಗರ: ದೇಶದಲ್ಲಿ ಸದೃಢವಾಗಿರುವ ಶಿಕ್ಷಣ ವ್ಯವಸ್ಥೆಯಿಂದ ಭಾರತೀಯರು ವಿಶ್ವವ್ಯಾಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ನಗರದ ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಪಠ್ಯೇತರ ಚಟುವಟಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಎಲ್ಲರಿಗೂ ಶಿಕ್ಷಣ ಸಿಗುವಂತೆ ಅಗತ್ಯ ವ್ಯವಸ್ಥೆ ಮಾಡುತ್ತಿದೆ. ವಿದ್ಯಾರ್ಥಿಗಳು ಸರ್ಕಾರ ನೀಡುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜು ಶಿಕ್ಷಣ ದುಬಾರಿ ಆಗಿರುವುದರಿಂದ ಆರ್ಥಿಕ ಸದೃಢರು ಮಾತ್ರ ಪದವಿ ಪಡೆಯುವ ವಾತಾವರಣವಿತ್ತು. ಓದುವ ಆಸೆ ಇದ್ದರೂ ಸರ್ಕಾರಿ ಕಾಲೇಜು ಇಲ್ಲದೆ ಇರುವುದರಿಂದ ಪದವಿ ಓದಲು ಸಾಧ್ಯವಾಗಲಿಲ್ಲ. 2004ರಲ್ಲಿ ಶಾಸಕನಾದ ಬಳಿಕ ಸರ್ಕಾರಿ ಕಾಲೇಜುಗಳ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡುತ್ತ ಬಂದಿದ್ದೇನೆ. ಗುಣಮಟ್ಟದ ಶಿಕ್ಷಣ ನೀಡಲು ವ್ಯವಸ್ಥೆ ಕಲ್ಪಿಸಿದ್ದೇನೆ. ಇಂದಿರಾ ಗಾಂಧಿ ಕಾಲೇಜು ಮತ್ತು ಪ್ರಥಮದರ್ಜೆ ಕಾಲೇಜಿನ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದೇನೆ ಎಂದರು.

ಪದವಿ ಶಿಕ್ಷಣದ ನಂತರ ಹೆಚ್ಚು ಉದ್ಯೋಗ ಅವಕಾಶಗಳು ಲಭಿಸುತ್ತಿವೆ. ವಿದೇಶದಲ್ಲಿ ಸಹ ಉದ್ಯೋಗ ಅವಕಾಶ ಸಿಗುತ್ತಿವೆ. ರಾಜ್ಯದಲ್ಲಿ ಬೆಂಗಳೂರಿಗೆ ಸೀಮಿತವಾಗಿದ್ದ ಐಟಿಬಿಟಿ ಕಂಪನಿಗಳನ್ನು ಬೇರೆ ಬೇರೆ ಜಿಲ್ಲೆಗಳಲ್ಲಿ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ವಹಿಸಬೇಕು. ಗೋಪಾಲಕೃಷ್ಣ ಬೇಳೂರು ಶಾಸಕ

ಪೌರಾಯುಕ್ತ ಎಚ್.ಕೆ.ನಾಗಪ್ಪ ಮಾತನಾಡಿ, ಪದವಿ ಶಿಕ್ಷಣ ಸಂದರ್ಭದಲ್ಲಿ ಹೆಚ್ಚು ಸವಾಲುಗಳು ಎದುರಾಗುತ್ತವೆ. ಪದವಿಯಲ್ಲಿ ಉತ್ತಮ ಫಲಿತಾಂಶ ಪಡೆದರೆ ನಿಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಲು ಅವಕಾಶ ಸಿಗುತ್ತದೆ. ವಿದ್ಯಾರ್ಥಿನಿಯರು ಗುರುಹಿರಿಯರ ಬಗ್ಗೆ ಗೌರವ ಹೊಂದಬೇಕು ಎಂದು ತಿಳಿಸಿದರು. ಪ್ರಾಚಾರ್ಯೆ ಡಾ. ರಾಜೇಶ್ವರಿ, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ, ರವಿಕುಮಾರ್, ಪ್ರಮುಖರಾದ ಎನ್.ಉಷಾ, ರಂಜನ್ ಶೆಟ್ಟಿ, ಡಾ. ಮೂಕಪ್ಪ ನಾಯ್ಕ, ಎಲ್.ಚಂದ್ರಪ್ಪ, ಚೇತನರಾಜ್ ಕಣ್ಣೂರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net