

ಭದ್ರಾವತಿ: ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ನಾಯಕತ್ವ ಗುಣ, ಆತ್ಮವಿಶ್ವಾಸ ಬೆಳೆಯುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.
ತಾಲೂಕಿನ ಬಾರಂದೂರಿನಲ್ಲಿರುವ ಸಂತ ಡೋಮಿನಿಕ್ ಶಾಲೆ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಶಾಲೆ ನಾಯಕರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವ ಅರಿತುಕೊಂಡು ಹೆಚ್ಚು ತೊಡಗಿಸಿಕೊಳ್ಳಬೇಕು. ಇದರಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಅವಕಾಶಗಳು ದೊರೆಯುತ್ತವೆ. ಉನ್ನತ ಸಾಧನೆ ಮಾಡಲು ಪ್ರೇರಣೆ ನೀಡುತ್ತದೆ ಎಂದು ತಿಳಿಸಿದರು.
ರೋವರ್ ಜಿಲ್ಲಾ ಆಯುಕ್ತ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಜಿಲ್ಲಾ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಶಾಲೆ ಪ್ರಾಚಾರ್ಯೆ ಸಿಸ್ಟರ್ ಜಿನ್ಫಿ ಇತರರಿದ್ದರು.