ಶಿಕ್ಷಣದ ಜತೆ ಕ್ರೀಡೆಗೂ ಆದ್ಯತೆ ಮುಖ್ಯ

19 RPT 1
ರಿಪ್ಪನ್‌ಪೇಟೆಯ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ತಹಸೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಸನ್ಮಾನಿಸಲಾಯಿತು. ಶಾಂತಮೂರ್ತಿ, ಯಶೋದಾ ಲಕ್ಷ್ಮಣ, ಈಶ್ವರ ಇತರರಿದ್ದರು.
Published on

ರಿಪ್ಪನ್‌ಪೇಟೆ: ಶಿಕ್ಷಣದ ಜತೆಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡುವುದು ಅವಶ್ಯಕ ಎಂದು ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು.

ಪಟ್ಟಣದ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ಏಕಾಗ್ರತೆ, ಮನೋಸಾಞರ್ಥ್ಯ ವೃದ್ಧಿಸುತ್ತದೆ. ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಸಂತೋಷದಿಂದ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಶಾಂತಮೂರ್ತಿ, ಯಶೋದಾ ಲಕ್ಷ್ಮಣ, ಈಶ್ವರ ಮಳಕೊಪ್ಪ, ಉಮೇಶ, ಎಲ್.ವೈ.ದಾನೇಶಪ್ಪ, ಎಚ್.ಎಂ.ವರ್ತೇಶ್, ಮುಖ್ಯಶಿಕ್ಷಕ ಚಂದ್ರಪ್ಪ, ಗುರುಪ್ರಸಾದ್, ಮುಸ್ತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net