

ಸೊರಬ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 18 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ತಾಲೂಕು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ರುದ್ರಪ್ಪ ಕಡ್ಲೇರ್ ಹೇಳಿದರು.
ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿ, ಬಡಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹಲವು ಯೋಜನೆಗಳ ಅನುಷ್ಠಾನ ಆಗುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಆಗುತ್ತಿವೆ. ದ್ವಿಭಾಷಾ ಕಲಿಕೆಗೆ ಒತ್ತು ನೀಡುತ್ತಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.
ತಾಲೂಕಿನ ಜಡೆ, ಅಂಕರವಳ್ಳಿ, ಚಿಟ್ಟೂರು, ಶಿರವಂತೆ ಗ್ರಾಮಕ್ಕೆ ಪಬ್ಲಿಕ್ ಶಾಲೆ ಮಂಜೂರು ಮಾಡಲಾಗಿದೆ. ಸಚಿವ ಮಧು ಬಂಗಾರಪ್ಪ ಅವರು ಇನ್ಫೋಸಿಸ್ ಸಿಎಸ್‌ಆರ್ ಫಂಡ್ ಮೂಲಕ ತಾಲೂಕಿನ 15 ಶಾಲೆಗಳ ಜೀರ್ಣೋದ್ಧಾರಕ್ಕೆ ಕ್ರಮ ಕೈಗೊಂಡಿದ್ದಾರೆ. ಇನ್ಫೋಸಿಸ್ ಸಂಸ್ಥೆಯು ಮೂಲ ಸೌಕರ್ಯ ಒದಗಿಸಲು ಮುಂದಾಗಿದೆ ಎಂದರು.
ತಾಪಂ ಮಾಜಿ ಅಧ್ಯಕ್ಷ ಗಣಪತಿ, ತಾಲೂಕು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಣ್ಣಪ್ಪ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಂ.ಡಿ.ಶೇಖರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜೈಶೀಲ ಗೌಡ, ಜಗದೀಶ್, ಬಸಪ್ಪ, ವಿಶ್ವನಾಥ್, ಸುರೇಶ್, ಶೇಖರಪ್ಪ, ಕುಮಾರಸ್ವಾಮಿ, ಸತ್ಯನಾರಾಯಣ ಇತರರಿದ್ದರು.