ಗ್ರಾಮಾಭಿವೃದ್ಧಿ ಯೋಜನೆಗಳಿಂದ ಪರಿವರ್ತನೆ

15 tth shibira
ತೀರ್ಥಹಳ್ಳಿಯಲ್ಲಿ ಏರ್ಪಡಿಸಿದ್ದ ಗಾಂಧಿ ಸ್ಮತಿ ಹಾಗೂ ಜಾಗೃತಿ ಶಿಬಿರವನ್ನು ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಉದ್ಘಾಟಿಸಿದರು. ಮುರಳೀಧರ ಶೆಟ್ಟಿ, ರಾಘವೇಂದ್ರ ಇತರರಿದ್ದರು.
Published on

ತೀರ್ಥಹಳ್ಳಿ: ವ್ಯಸನದಿಂದಾಗಿ ಯುವಜನತೆ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಈ ಹಂತದಲ್ಲಿ ಮಹಾತ್ಮ ಗಾಂಧಿ ಅವರ ಆಶಯಕ್ಕೆ ಪೂರಕವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳು ಪರಿವರ್ತನೆಗೆ ಕಾರಣವಾಗಿವೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆಯಿಂದ ಪಟ್ಟಣದ ಗೋಪಾಲ ಗೌಡ ರಂಗಮಂದಿರದಲ್ಲಿ ಆಯೋಜಿಸಿದ್ದ ಗಾಂಧಿ ಸ್ಮತಿ ಮತ್ತು ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಡಾ. ವೀರೇಂದ್ರ ಹೆಗ್ಗಡೆ ಅವರ ಪರಿಕಲ್ಪನೆ, ಪ್ರೇರಣೆಯಿಂದ ಕೊಡಚಾದ್ರಿ ಸ್ವಸಹಾಯ ಸಂಘಗಳನ್ನು ಹುಟ್ಟುಹಾಕಿ 150 ಕೋಟಿ ರೂ. ಆರ್ಥಿಕ ನೆರವು ನೀಡಿದ್ದೇನೆ ಎಂದು ತಿಳಿಸಿದರು.

ಮದ್ಯಪಾನ, ಧೂಮಪಾನ, ಗಾಂಜಾ ಸೇವನೆ ಸೇರಿ ಇತರ ವ್ಯಸನಗಳಿಂದ ಸಮಾಜದಲ್ಲಿ ಕೆಟ್ಟ ಪರಿಣಾಮ ಬೀರುತ್ತಿದ್ದು, ವ್ಯಸನಿಗಳ ಕುಟುಂಬ ನೋವು ಅನುಭವಿಸುವಂತಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸುತ್ತಿರುವ ಮದ್ಯವರ್ಜನ ಶಿಬಿರಗಳು ಚಳವಳಿ ರೂಪದಲ್ಲಿ ಸಮಾಜದ ಪರಿವರ್ತನೆಗೂ ಕಾರಣವಾಗಿವೆ ಎಂದರು.

ಜನಜಾಗೃತಿ ವೇದಿಕೆ ಜಿಲ್ಲಾ ನಿರ್ದೇಶಕ ಮುರಳೀಧರ ಶೆಟ್ಟಿ ಮಾತನಾಡಿ, ಯೋಜನೆ ಚಟುವಟಿಕೆಯಲ್ಲಿ ಸಾಲದ ಯೋಜನೆ ಅಲ್ಪವಾಗಿದೆ. ಸಮಾಜ ಸುಧಾರಣೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಮಹಿಳಾ ಸಬಲೀಕರಣ, ಮದ್ಯವರ್ಜನ ಶಿಬಿರ, ವೃದ್ಧಾಪ್ಯ ವೇತನ, ಶಿಕ್ಷಾ ವೇತನ, ಕೆರೆ ಅಭಿವೃದ್ಧಿ ಮತ್ತಿತರ ಕಾರ್ಯಕ್ರಮಗಳು ಪ್ರಮುಖವಾಗಿವೆ ಎಂದು ಹೇಳಿದರು.

ಸೊಪ್ಪುಗುಡ್ಡೆ ರಾಘವೇಂದ್ರ, ಡಾ. ಜೀವಂಧರ ಜೈನ್, ಯೋಜನಾಧಿಕಾರಿ ಮಮತಾ ಶೆಟ್ಟಿ, ದಾಮೋದರ ಶರ್ಮಾ, ಅಶೋಕಮೂರ್ತಿ, ಚಂದವಳ್ಳಿ ಸೋಮಶೇಖರ್, ಕೆ.ಎಂ.ಮೋಹನ್, ಶಶಿಧರ ಹಂದೆ, ಅರುಣ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net