ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಅವಶ್ಯಕ

17sor5
ಸೊರಬ ತಾಲೂಕು ಸಮನಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಸ್ಥೆಯಿಂದ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಪಂ ಮಾಜಿ ಉಪಾಧ್ಯಕ್ಷ ಡಿ.ಶಿವಾನಂದಪ್ಪ ಉದ್ಘಾಟಿಸಿದರು. ಡಾ. ಅಮಿತ್‌ರಾಜ್, ಎಂ.ದಿನೇಶ್ ಇತರರಿದ್ದರು.
Published on

ಸೊರಬ: ಮಿತವಾದ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶಿವಮೊಗ್ಗ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಡಾ. ಅಮಿತ್‌ರಾಜ್ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶಿವಮೊಗ್ಗದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ, ಆನವಟ್ಟಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತವನಂದಿ ವಲಯದ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕ್ಯಾನ್ಸರ್ ಮುಂಜಾಗ್ರತೆ ಕುರಿತು ಮಾತನಾಡಿದರು.

ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಸೇವಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಕ್ಯಾನ್ಸರ್ ಕಾಯಿಲೆಗೆ ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಬಹುದು. ವೈದ್ಯರಿಂದ ಸೂಕ್ತ ಸಲಹೆ ಪಡೆಯುವುದು ಅಗತ್ಯ ಎಂದು ತಿಳಿಸಿದರು. 86 ಸದಸ್ಯರಿಗೆ ಕ್ಯಾನ್ಸರ್ ಮುಂಜಾಗ್ರತೆ ತಪಾಸಣೆ ನಡೆಸಲಾಯಿತು.

ಜಿಲ್ಲಾ ನಿರ್ದೇಶಕ ಎಂ.ದಿನೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಎಸ್.ಕಾಳಿಂಗರಾಜ್, ಗ್ರಾಪಂ ಮಾಜಿ ಉಪಾಧ್ಯಕ್ಷ ಡಿ.ಶಿವಾನಂದಪ್ಪ, ಸಮನವಳ್ಳಿ ಒಕ್ಕೂಟದ ಅಧ್ಯಕ್ಷೆ ಮುತ್ತಮ್ಮ ಹಿರೇಮಠ, ಆನವಟ್ಟಿ ಪಪಂ ಆರೋಗ್ಯ ನಿರೀಕ್ಷಕ ಪ್ರಭು, ಜಯಂತಿ, ಸುಧಾ ಶಿವಪ್ರಸಾದ್, ಬಾಬುಸಾಬ್, ಚಂದ್ರಶೇಖರ್ ಗೌಡ, ಉಮೇಶ, ಅರವಿಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net