ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತು ಬಳಸಿ

5 skp 3
Published on

ಶಿಕಾರಿಪುರ: ಅಭಿವೃದ್ಧಿ ಹೆಸರಲ್ಲಿ ಪ್ರತಿದಿನ ಪ್ರಕೃತಿ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಕುಮದ್ವತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ವೀರೇಂದ್ರ ಹೇಳಿದರು.

ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿ, ಮನುಷ್ಯನ ದಬ್ಬಾಳಿಕೆಯಿಂದ ಪ್ರಕೃತಿ ಮುನಿಸಿಕೊಂಡು ಬರಗಾಲ, ಅಕಾಲಿಕ ಮಳೆ, ಭೂಕಂಪನ, ಚಂಡಮಾರುತದ ಮೂಲಕ ನಮ್ಮನ್ನು ಶಿಕ್ಷಿಸುತ್ತಿದೆ ಎಂದರು. ಪರಿಸರ ಸಂರಕ್ಷಣೆ ದೃಷ್ಟಿಯಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಲ್ಲಬೇಕು. ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳನ್ನು ಜನರು ಬಳಸಬೇಕು ಎಂದರು.

ವಿಜ್ಞಾನ ವಿಭಾಗದ ಮುಖ್ಯಸ್ಥ ಪರ್ವೇಜ್ ಅಹ್ಮದ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಚಂದ್ರಶೇಖರ್, ಉಪನ್ಯಾಸಕರಾದ ಯೋಗರಾಜ್, ಸಂಜೀವ್‌ಕುಮಾರ್, ನಳಿನಾ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net