ದೇವರ ಸ್ವರೂಪದಲ್ಲಿ ಪರಿಸರ ಪೂಜೆ

3sor3
ಸೊರಬ ತಾಲೂಕಿನ ಪ್ರಸಿದ್ಧ ಸುಕ್ಷೇತ್ರ ಬಂಕಸಾಣದ ಹೊಳೆಲಿಂಗೇಶ್ವರ ಕ್ಷೇತ್ರದಲ್ಲಿ ವರದಾರತಿ ನಡೆಯಿತು.
Published on

ಸೊರಬ: ಭಾರತೀಯ ಪರಂಪರೆಯ ಧಾರ್ಮಿಕ ಆಚರಣೆಯಲ್ಲಿ ಪರಿಸರವನ್ನು ದೇವರ ಸ್ವರೂಪದಲ್ಲಿ ಪೂಜಿಸಲಾಗುತ್ತಿದೆ. ಪರಿಸರ ಸಂರಕ್ಷಣೆ ವರದಾರತಿಯ ಮೂಲ ಉದ್ದೇಶ ಎಂದು ಕಾನುಕೇರಿ ಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಬಂಕಸಾಣದ ಹೊಳೆಲಿಂಗೇಶ್ವರ ಕ್ಷೇತ್ರದಲ್ಲಿ ಆಯೋಜಿಸಿದ್ದ ವರದಾರತಿ ನೇತೃತ್ವ ವಹಿಸಿ ಮಾತನಾಡಿ, ಭೂಮಿಯನ್ನು ದೇವರೆಂದು ಪೂಜಿಸುತ್ತೇವೆ. ಅದರಲ್ಲಿರುವ ಎಲ್ಲವೂ ದೇವರ ಸ್ವರೂಪ ಎಂದು ಆರಾಧಿಸುತ್ತೇವೆ. ಅವುಗಳ ರಕ್ಷಣೆ ನಮ್ಮ ಕರ್ತವ್ಯವಾಗಬೇಕು ಎಂದು ತಿಳಿಸಿದರು.

ಗೊಗ್ಗೇಹಳ್ಳಿ ಪಂಚಮಠ ಸಂಸ್ಥಾನದ ಶ್ರೀ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಲಕ್ಕವಳ್ಳಿ ಜೈನಮಠದ ಸ್ವಸ್ತಿಶ್ರೀ ವೃಷಭಸೇನಾ ಭಟ್ಟಾರಕ ಸ್ವಾಮೀಜಿ, ಡಾ. ಗುರುಬಸವ ದೇವರು, ಜೈನ ಮುನಿ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಸಿದ್ಧಲಿಂಗಸ್ವಾಮಿ, ಪಂಚಾಕ್ಷರಯ್ಯ ಸ್ವಾಮಿ ಆರತಿ ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net