ಸಿದ್ಧರಾಮೇಶ್ವರರು ಸರ್ವಶ್ರೇಷ್ಠ ವಚನಕಾರರು

CTD 15 Siddarameshwara-04
Published on

ಚಿತ್ರದುರ್ಗ: ಶಿವಯೋಗಿ ಸಿದ್ಧರಾಮೇಶ್ವರರು ವಚನಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ಸರ್ವಶ್ರೇಷ್ಠರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಹೇಳಿದರು. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಡಿಸಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸಿದ್ಧ ಪುರುಷರು, ಯೋಗಿಗಳು, ತಪಸ್ವಿಗಳು ಜನಿಸಿದ ಪುಣ್ಯಭೂಮಿ ಭಾರತ. ಅದೇ ರೀತಿ ಸಮ ಸಮಾಜ ನಿರ್ಮಾಣಕ್ಕೆ 12ನೇ ಶತಮಾನದಲ್ಲಿ ಬಸವಣ್ಣ ಅವರೊಟ್ಟಿಗೆ ಶ್ರಮಿಸಿ ಕರ್ಮ, ಕಾಯಕದ ಮಹತ್ವ ಸಾರಿದ ಸಿದ್ಧರಾಮೇಶ್ವರರು ಮಹಾನ್ ಸಂತ ಎಂದು ಬಣ್ಣಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜನ ಮಾತನಾಡಿ, ಸಿದ್ಧರಾಮೇಶ್ವರರು ಸ್ವರ, ತ್ರಿವಿಧಿ, ಅಷ್ಠಾವರಣ ಸೇರಿ ಇತರೆ ವಚನಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಅದ್ಭುತವಾದ ಕೊಡುಗೆ ನೀಡಿದ್ದಾರೆ ಎಂದರು.

ಭೋವಿ ಸಂಘದ ಜಿಲ್ಲಾಧ್ಯಕ್ಷ ಟಿ.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಚ್.ಲಕ್ಷ್ಮಣ್, ನಗರಸಭೆ ಸದಸ್ಯ ತಿಮ್ಮಣ್ಣ, ಎಸ್‌ಜೆಎಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಿ.ಸಿ.ಮೋಹನ್, ಭೋವಿ ಮಠದ ಸಿಇಒ ಗೌನಹಳ್ಳಿ ಗೋವಿಂದಪ್ಪ, ಮುಖಂಡ ಭರತ್, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net