ನಾವು ಯಾರೂ ಕೂಡ ಚೈತ್ರ ಬೆಂಬಲಕ್ಕೆ ನಿಂತಿಲ್ಲ, ರಕ್ಷಣೆಯೂ ಮಾಡುತ್ತಿಲ್ಲ: ಸಚಿವೆ ಶೋಭಾ ಕರಂದ್ಲಾಜೆ

Shobha Karandlaje
Published on

-ಚೈತ್ರ ಕುಂದಾಪುರ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ

ಉಡುಪಿ: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರ ಕುಂದಾಪುರ ಜತೆಗೆ ನನಗೆ ಯಾವುದೇ ರೀತಿಯ ನೇರ ಸಂಪರ್ಕ ಇರಲಿಲ್ಲ. ನಾವು ಯಾರೂ ಕೂಡ ಆಕೆಯ ಬೆಂಬಲಕ್ಕೆ ನಿಂತಿಲ್ಲ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆಕೆ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು..ಗೊತ್ತಿಲ್ಲ. ನನ್ನ ಜತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆ ಚೈತ್ರಾ ಫೋಟೋ ತೆಗೆದುಕೊಂಡಿರಬಹುದು. ನನಗೆ ಚೈತ್ರ ಫೋನ್ ಮಾಡ್ಲಿಲ್ಲ ನಾನು ಕೂಡ ಅವಳಿಗೆ ಫೋನ್ ಮಾಡಿದ್ದು ಇಲ್ಲ ಎಂದಿದ್ದಾರೆ.

ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರು ಕೂಡಾ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಲಿ. ತಪ್ಪು ಮಾಡಿದರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ. ಉನ್ನತ ಮಟ್ಟದ ತನಿಖೆಗೆ ನಾನು ಆಗ್ರಹಿಸುತ್ತೇನೆ. ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರು ಅವಳನ್ನು ರಕ್ಷಣೆ ಮಾಡುತ್ತಿಲ್ಲ. ಯಾರು ತಪ್ಪು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು. ಕಾನೂನು ಮೂಲಕ ಕ್ರಮ ಕೈಗೊಂಡು ತನಿಖೆ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ ಎಂದು ತಿಳಿಸಿದ್ದಾರೆ.

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ ಸೇರಿದಂತೆ 5 ಜನರನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net