ಮುಷ್ಕರ ನಡೆಸಲು ಮುಂದಾಗಿದ್ದವರಿಗೆ ಶಾಕ್; ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದ ಹೈಕೋರ್ಟ್| Bus Protest

KSRTC
Published on

ಬೆಂಗಳೂರು:ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇನ್ನೂ ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿದ್ದು, ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್​ ಸೂಚನೆ ನೀಡಿದೆ.

ಸಾರಿಗೆ ನೌಕರರನ್ನು ಮನವೊಲಿಸಲು ಸಿಎಂ ಸಿದ್ದರಾಮಯ್ಯನವರು ಮುಂದಾಗಿದ್ದು, ವೇತನ ಪರಿಷ್ಕರಣೆ ಹಾಗೂ ಹಿಂಬಾಕಿ ವೇತನಕ್ಕೆ ನೌಕರರ ಪಟ್ಟು ಹಿಡಿದಿದ್ದಾರೆ. ಆದರೆ, ಆರ್ಥಿಕ ಪರಿಸ್ಥಿತಿಯನ್ನು ಸರ್ಕಾರದ ಕಾರ್ಯದರ್ಶಿ ತಿಳಿಸಿದ್ದಾರೆ. ಆದರೆ 38 ತಿಂಗಳ ಬಾಕಿ ವೇತನ ಬರಬೇಕು ಎಂದು ಆಗ್ರಹಿಸಿದ್ದು, ವೇತನ ಪರಿಷ್ಕರಣೆಗೆ ಆಗಲೇಬೇಕು ಎಂದು ಸಾರಿಗೆ ನೌಕರರ ಸಂಘಟನೆ ಪಟ್ಟು ಹಿಡಿದಿದೆ. ಸರ್ಕಾರ ಹಾಗೂ ಸಾರಿಗೆ ನೌಕರರ ಸಂಘಟನೆ ಜೊತೆಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಹಿಂಬಾಕಿ ವೇತನ ಹಾಗೂ ವೇತನ ಪರಿಷ್ಕರಣೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿಲ್ಲ.  ವೇತನ ಪರಿಷ್ಕರಣೆ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬಾರದಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡಲು ನಿರ್ಧರಿಸಿದ್ದಾರೆ.  ಮುಷ್ಕರ ವಾಪಾಸ್ ಸಿಎಂ ಮನವಿ ಸಲ್ಲಿಸಿದ್ದಾರೆ. ಆದರೆ ನಾವು ಮುಷ್ಕರ ವಾಪಾಸ್ ಪಡೆಯಲ್ಲ ಎಂದು ಸಾರಿಗೆ ನೌಕರರು ತಿಳಿಸಿದ್ದಾರೆ.

ಈ ಬಗ್ಗೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ಆದೇಶದ ಪ್ರತಿ ಇನ್ನೂ ನಮ್ಮ ಕೈಗೆ ಸೇರಿಲ್ಲ. ಆದೇಶ ಪ್ರತಿ ಕೈತಲುಪಿದ ಬಳಿಕ ಬಂದ್‌ ಬಗ್ಗೆ ನಿರ್ಧಾರ ಮಾಡುತ್ತೇವೆ. ಕೋರ್ಟ್ ಯಾವ ದೃಷ್ಟಿಯಲ್ಲಿ ಈ ರೀತಿಯಾಗಿ ಆದೇಶ ಕೊಟ್ಟಿದೆ ಗೊತ್ತಿಲ್ಲ. ನಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದರೆ ಒಳ್ಳೆಯದಿತ್ತು. ಒಂದು ದಿನ ಮುಂದೂಡಿ ಮತ್ತೊಂದು ದಿನ ಪ್ರತಿಭಟನೆ ನಡೆಸಿದರೆ ಅದರಿಂದ ಏನು ಬದಲಾವಣೆ ಆಗಲಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net