ಶಾಕಿಂಗ್ ನ್ಯೂಸ್ ! ವಿಧಾನಪರಿಷತ್ ಉಪಸಭಾಪತಿ ಎಸ್​.ಎಲ್​.ಧರ್ಮೇಗೌಡ ಆತ್ಮಹತ್ಯೆ..

S L DharmeGowda
Published on

ಚಿಕ್ಕಮಗಳೂರು: ನಾಡಿನ ಜನತೆಗೆ ಬೆಳ್ಳಂಬೆಳಗ್ಗೆಯೇ ಶಾಕಿಂಗ್ ನ್ಯೂಸ್. ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೆಗೌಡ ಆತ್ಮಹತ್ಯೆ ಮಾಡಿಕೊಂಡಿರುವ ವಿಷಾದದ ಸಂಗತಿ ವರದಿಯಾಗಿದೆ. ಕಡೂರು ತಾಲೂಕಿನ ಗುಣಸಾಗರದ ಸಮೀಪ ಸೋಮವಾರ ರಾತ್ರಿ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರಿನಲ್ಲಿಯೇ ಚಾಲಕನನ್ನು ಇರುವಂತೆ ಹೇಳಿದ್ದ ಎಸ್ ಎಲ್ ಧರ್ಮೆಗೌಡ ರೈಲ್ವೆ ಹಳಿಯತ್ತ ಸಾಗಿ ಈ ಕೃತ್ಯ ಎಸಗಿದ್ದಾರೆ. ಚಿಕ್ಕಮಂಗಳೂರು ಶಾಸಕ ಸಿ.ಟಿ.ರವಿ ಸ್ಥಳಕ್ಕೆ ಧಾವಿಸಿದ್ದು, ಸ್ಥಿತಿಗತಿ ಪರಿಶೀಲಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ತೆರಳಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net