ಮತಗಳ್ಳತನದ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ.ಸಿ.ವೇಣುಗೋಪಾಲ್ | Vote Rigging

Untitled design - 2025-08-01T115013.949
Published on

ಬೆಂಗಳೂರು: ಆಗಸ್ಟ್‌ 5 ರಂದು ಮತಗಳ್ಳತನದ ( Vote Rigging ) ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಮಾಧ್ಯಮಗಳಿಗೆ ಗುರುವಾರ ರಾತ್ರಿ ಪ್ರತಿಕ್ರಿಯೆ ನೀಡಿದರು. ಕರ್ನಾಟಕ ಚುನಾವಣಾ ಆಯೋಗದ ವಿರುದ್ದ ದೊಡ್ಡ ಹೋರಾಟ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಇದರ ವಿರುದ್ದ ದೊಡ್ಡ ಹೋರಾಟ ನಡೆಯಲಿದೆ ಎಂದರು.

ಮತಗಳ್ಳತನದ ವಿರುದ್ಧ ಪ್ರತಿಭಟನೆ: ಡಿಕೆಶಿ

ಬೆಂಗಳೂರು: ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ‌ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

"ಮತದಾರರ ಹಕ್ಕು, ಸಂವಿಧಾನದ ರಕ್ಷಣೆ ಮಾಡಬೇಕಿದೆ. ಕರ್ನಾಟಕದ ಭೂಮಿಯಿಂದಲೇ ಈ ಹೋರಾಟ ಪ್ರಾರಂಭ ಮಾಡಿದರೆ ಹೆಚ್ಚಿನ ಶಕ್ತಿ ದೊರೆಯುತ್ತದೆ ಎಂದು ರಾಹುಲ್ ಗಾಂಧಿಯವರು ಇಲ್ಲಿಂದ ಪ್ರಾರಂಭ ಮಾಡುತ್ತಿದ್ದಾರೆ. ವಿಧಾನಸಭೆ, ಲೋಕಸಭೆ ಚುನಾವಣೆ ವೇಳೆ ಆದಂತಹ ಹಲವಾರು ಲೋಪದೋಷಗಳನ್ನು ನಮ್ಮ ನಾಯಕರು ಎತ್ತಿಹಿಡಿಯಲಿದ್ದಾರೆ" ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net