

ಕರ್ನೂಲ್: ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿ ಖಾಯಿಲಗೆಳು (Heart Related Issues) ಜನರನ್ನು ಹೆಚ್ಚು ಬಾಧಿಸುತ್ತಿದ್ದು, ಮಕ್ಕಳು ಯುವಕರು, ವೃದ್ಧರು ಎಂಬ ವ್ಯತ್ಯಾಸವಿಲ್ಲದೆ ಈ ರೋಗಕ್ಕೆ ಜನರು ಬಲಿಯಾಗುತ್ತಿದ್ದಾರೆ. ಶಿವಲಿಂಗಕ್ಕೆ ಅಭಿಷೇಕ ಮಾಡುವಾಗ ವ್ಯಕ್ತಿಯೊಬ್ಬರು ಹೃದಯಾಘಾತವಾಗಿ (Heart Attack) ಮೃತಪಟ್ಟ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಘಟನೆಯೊಂದು ಆಂಧ್ರಪ್ರದೇಶದ ಕರ್ನೂಲ್ನಲ್ಲಿ ನಡೆದಿದ್ದು, ಈ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ.
ಮೃತರನ್ನು ವಂಶಿ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನಲ್ಲಿರುವ ಅಮೆಜಾನ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನವೆಂಬರ್ 22ರಂದು ಹಂಚಿಕೊಳ್ಳಲಾದ ಈ ವಿಡಿಯೋ 197 ಸಾವಿರಕ್ಕೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದ್ದು, ಈ ವಿಡಿಯೋವನ್ನು ಎನ್ಡಿಟಿವಿ ಪೋಸ್ಟ್ ಮಾಡಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕೃಷ್ಣಗಿರಿ ಮಂಡಲದ ಪೆನುಮಾಡ ಗ್ರಾಮದಲ್ಲಿ ವಂಶಿ ಎಂಬಾತ ತನ್ನ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಂಡಿದ್ದ. ವಂಶಿ ಮತ್ತು ಸ್ನೇಹಿತರು ಜೊತೆಗೂಡಿ ಮದುಮಗನಿಗೆ ಗಿಫ್ಟ್ ಕೊಟ್ಟು ತಮಾಷೆ ಮಾಡುತ್ತಿದ್ದ ಸಂದರ್ಭದಲ್ಲಿ ಯುವಕ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ ಕೆಲ ದಿನಗಳಿಂದ ಹೃದಯಾಘಾತದಿಂದಾಗಿ ಜನರು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಭ ಸಮಾರಂಭ, ದೇವಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜನರು ಅಸುನೀಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.