ರಾಜ್ಯದಲ್ಲಿ ಇನ್ಮುಂದೆ ದಿನದ 24 ಗಂಟೆಯೂ ತೆರೆಯಬಹುದು ಅಂಗಡಿ!

sho[ps
Published on

ಬೆಂಗಳೂರು: ಕರೊನಾದಿಂದ ಹದಗೆಟ್ಟುಹೋಗಿರುವ ಆರ್ಥಿಕತೆಗೆ ಸ್ವಲ್ಪಮಟ್ಟಿಗೆ ಬಲ ತಂದುಕೊಡುವ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಲೇ ಇವೆ. ಆ ಪಟ್ಟಿಗೆ ಇದೀಗ ಇನ್ನೊಂದು ಕ್ರಮ ಸೇರ್ಪಡೆಯಾಗಿದೆ.

ಇನ್ನು ಮುಂದೆ ರಾಜ್ಯದಲ್ಲಿ ನೋಂದಾಯಿತ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಬಹುದು ಎಂದು ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅದಕ್ಕೆ ಪೂರಕವಾಗಿ ಕೆಲವು ಷರತ್ತುಗಳನ್ನೂ ವಿಧಿಸಿದೆ.

ಹೆಚ್ಚುವರಿ ಅವಧಿ ಕಾರ್ಯ ನಿರ್ವಹಿಸುವ ಅಂಗಡಿ ಮುಂಗಟುಗಳ ಮಾಲೀಕರು ಹೆಚ್ಚುವರಿ ನೌಕರರನ್ನು ನೇಮಕ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ನೌಕರನನ್ನು ದಿನಕ್ಕೆ 8 ಗಂಟೆಗಿಂತ ಹೆಚ್ಚು ದುಡಿಸಿಕೊಳ್ಳಬಾರದು. ಒಂದು ವೇಳೆ ಓವರ್ ಟೈಮ್ ಡ್ಯೂಟಿ ನಿಗದಿಪಡಿಸಿದರೂ ಅದು 2 ಗಂಟೆಗಿಂತ ಹೆಚ್ಚಿರಬಾರದು. ವಾರಕ್ಕೆ ಒಂದು ದಿನ ಕಡ್ಡಾಯವಾಗಿ ರಜೆ ನೀಡಬೇಕು ಎಂದು ಷರತ್ತು ಹಾಕಿದೆ.

ಯಾವುದೇ ಮಹಿಳಾ ಸಿಬ್ಬಂದಿಯನ್ನು ರಾತ್ರಿ 8 ಗಂಟೆಯ ನಂತರ ದುಡಿಸಿಕೊಳ್ಳಬಾರದು. ಒಂದು ವೇಳೆ ಮಹಿಳಾ ಸಿಬ್ಬಂದಿಯೇ ಸ್ವಇಚ್ಛೆಯಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕೆಲಸ ಮಾಡಲು ಮುಂದೆಬಂದರೆ, ಅಂಥವರಿಂದ ಲಿಖಿತ ರೂಪದಲ್ಲಿ ಒಪ್ಪಿಗೆ ಪತ್ರ ಬರೆಸಿಕೊಳ್ಳಬೇಕು . ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆ, ಸುರಕ್ಷತಾ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net