ಅಭಿಮಾನಿಗಳು ಪಕ್ಷ ಸಂಘಟನೆಯತ್ತ ಗಮನಹರಿಸಿ, ಸಮಾಜದ ಹೆಸರಿನಲ್ಲಿ ಸಭೆ ನಡೆಸುವ ಪ್ರಯತ್ನ ನಿಲ್ಲಿಸಿ: ಬಿ.ವೈ.ವಿಜಯೇಂದ್ರ ಮನವಿ | Party Organization

dk - 2025-03-01T113315.183
Published on

Party Organization:ಅಭಿಮಾನಿಗಳು ತಮ್ಮ ಗಮನವನ್ನು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸಬೇಕೆ ಹೊರತು, ಸಮಾಜದ ಹೆಸರಿನಲ್ಲಿ ಸಭೆಗಳನ್ನು ಸಂಘಟಿಸುವ ಪ್ರಯತ್ನಗಳನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಶನಿವಾರ(ಮಾ.01) ಹಂಚಿಕೊಂಡಿರುವ ವಿಜಯೇಂದ್ರ,  ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಬಿ.ಎಸ್. ಯಡಿಯೂರಪ್ಪನವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದವನು ಎಂಬ ಬಗ್ಗೆ ಕಾಳಜಿ ಪೂರ್ವಕ ಹೆಮ್ಮೆ ಇರಿಸಿಕೊಂಡಿದ್ದೇನೆ.

ಈ ನಿಟ್ಟಿನಲ್ಲಿ ಸಮಾಜದ ಆಶಯಕ್ಕೆ ಪೂರಕವಾಗಿ ಸರ್ವ ಸಮಾಜಗಳ ಬಗ್ಗೆ ಸಮಭಾವ ಇಟ್ಟುಕೊಂಡು ಒಟ್ಟು ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಚಿಂತಿಸುವವನು, ಆ ಮೂಲಕ ಸಮಗ್ರ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಮಹಾ ಸಂಕಲ್ಪದ ಗುರಿ ಸಾಧಿಸಲು ಪರಿಶ್ರಮಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಸಿದ್ದಾಂತ ಪ್ರತಿಪಾದಿಸುವ ಒಬ್ಬ ನಿಷ್ಠ ಕಾರ್ಯಕರ್ತನಾಗಿ ಹೆಜ್ಜೆ ಇಡುತ್ತಿದ್ದೇನೆ ಎಂದಿದ್ದಾರೆ.

ಕೆಲವು ಹಿತೈಷಿಗಳು ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನನ್ನ ಹಾಗೂ ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿನ ಅಭಿಮಾನದ ಕಾರಣಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಸರಣೀ ಸಭೆಗಳನ್ನು ನಡೆಸಲು ಹೊರಟಿರುವ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣದಲ್ಲೇ ಇದನ್ನು ನಿಲ್ಲಿಸುವಂತೆ ತಿಳಿಸಿದ್ದೇನೆ.

ಇದರಿಂದ ಪಕ್ಷಕ್ಕೂ ಸಹ ಮುಜುಗರದ ಸನ್ನಿವೇಶ ಸೃಷ್ಟಿ ಮಾಡಲಿದೆ, ಆದ್ದರಿಂದ ನಮ್ಮ ಹಿತೈಷಿಗಳು ಹಾಗೂ ಅಭಿಮಾನಿಗಳು ತಮ್ಮ ಗಮನವನ್ನು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸಬೇಕೆ ಹೊರತು, ಸಮಾಜದ ಹೆಸರಿನಲ್ಲಿ ಸಭೆಗಳನ್ನು ಸಂಘಟಿಸುವ ಪ್ರಯತ್ನಗಳನ್ನು ಈ ಕೂಡಲೇ ನಿಲ್ಲಿಸುವಂತೆ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net