ತುಪ್ಪೂರಲ್ಲಿ ಶ್ರಾವಣ ಸಂಭ್ರಮ

05bhr 3
ಬಾಳೆಹೊನ್ನೂರು ಸಮೀಪದ ತುಪ್ಪೂರು ಬಿರೇಕಲ್ಲು ಭೂತೇಶ್ವರಸ್ವಾಮಿ ಹಾಗೂ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಸತ್ಯನಾರಾಯಣ ಪೂಜೆ ನಡೆಯಿತು.
Published on

ಬಾಳೆಹೊನ್ನೂರು: ಸಮೀಪದ ತುಪ್ಪೂರು ಬಿರೇಕಲ್ಲು ಭೂತೇಶ್ವರ ಸ್ವಾಮಿ ಮತ್ತು ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳನ್ನು ಶ್ರದ್ಧಾ, ಭಕ್ತಿಯಿಂದ ಇತ್ತೀಚೆಗೆ ನಡೆಸಲಾಯಿತು.
ಶ್ರಾವಣ ಮಾಸದ ಅಂಗವಾಗಿ ಬಿರೇಕಲ್ಲು ಭೂತೇಶ್ವರ ಸ್ವಾಮಿ, ದುರ್ಗಾಪರಮೇಶ್ವರಿ, ನಾಗ ದೇವರು, ಉಮಾ ಮಹೇಶ್ವರಿ, ನವಗ್ರಹ ದೇವರು, ಹುಲಿ ಚೌಡೇಶ್ವರಿ, ಮಳಿಯಾಳಿ ಜಟ್ಟಿಗ, ಬಸವಣ್ಣ ಹಾಗೂ ಪರಿವಾರ ದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ, ಪುಷ್ಪಾಲಂಕಾರ ನೆರವೇರಿಸಿ ಮಹಾಮಂಗಳಾರತಿ ಮಾಡಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ.ರಾಜೇಗೌಡ ದಂಪತಿಗಳನ್ನು ದೇವಸ್ಥಾನ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದೇವಸ್ಥಾನ ಸಮಿತಿ ಅಧ್ಯಕ್ಷ ಸುಬ್ರಾಯಗೌಡ, ಕಾರ್ಯದರ್ಶಿ ಮಂಜುನಾಥ್ ತುಪ್ಪೂರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net