

ಕಂಪಲಾಪುರ: ಕಾರ್ತಿಕ ಮಾಸದ ಕಡೇ ಸೋಮವಾರದ ಅಂಗವಾಗಿ ಶ್ರೀ ಕರಕಂಠೇಶ್ವರ ದೇವಸ್ಥಾನದಲ್ಲಿ ವಿವಿಧ ಪೂಜಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿದವು.
ಬೆಳಗಿನ ಜಾವದಿಂದಲೇ ದೇವರಿಗೆ ಪೂಜಾ ವಿಧಿವಿಧಾನಗಳು ನೆರವೇರಿದವು. ಮಹಾ ಮಂಗಳಾರತಿ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಜನರು ಆಗಮಿಸಿ ಪೂಜೆ ಸಲ್ಲಿಸಿದರು. ರಾತ್ರಿ ಮೈಸೂರಿನ ಮಂಜು ಮ್ಯೂಸಿಕ್ ತಂಡದಿಂದ ಭಕ್ತಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭಕ್ತರು ದೀಪಗಳನ್ನು ಹಚ್ಚಿದರು.