

ಬೆಂಗಳೂರು: ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಶ್ರೀರಾಮ ಸೇನೆ ದೂರು ಸಲ್ಲಿಸಿದೆ.
ಶ್ರೀರಾಮ ಸೇನೆ, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಸುಂದ್ರೇಶ್ ನರ್ಗಲ್, ಬುಧವಾರ ಕಬ್ಬನ್ ಪಾರ್ಕ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಕೋಮುಸೌಹಾರ್ದ ಕದಡುವ ಉದ್ದೇಶದಿಂದ ಸನಾತನ ಧರ್ಮವನ್ನು ಅವಮಾನಿಸಿ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ.
ಇದರಿಂದ ಸಮಾಜದಲ್ಲಿ ಕೋಮು ದ್ವೇಷಕ್ಕೆ, ದಂಗೆಗಳಿಗೆ ಪ್ರಚೋಧನೆ ನೀಡಲಾಗಿದೆ. ಇಂತಹ ವಿವಾದಾತ್ಮಕ ಹೇಳಿಕೆಯಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ಉಂಟಾಗಲಿದೆ. ಈ ಕೂಡಲೇ ಉದಯನಿಧಿ ಸ್ಟಾಲಿನ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು, ಪ್ರಕರಣ ದಾಖಲಿಸಲು ಮೇಲಾಧಿಕಾರಿಗಳ ಮೊರೆ ಹೋಗಿದ್ದಾರೆ.