ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿ ಉತ್ಸವ

15sor3
ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಸೊರಬದ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ಪಲ್ಲಕ್ಕಿ ಉತ್ಸವ ಜರುಗಿತು.
Published on

ಸೊರಬ: ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಶುಕ್ರವಾರ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಬೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಪೂಜೆ ಮಾಡಿದರು.

ಹುಣ್ಣಿಮೆ ನಿಮಿತ್ತ ಶ್ರೀ ರೇಣುಕಾಂಬಾ ದೇವಿ ಪಲ್ಲಕ್ಕಿ ಉತ್ಸವ ದೇವಸ್ಥಾನದಿಂದ ವಾದ್ಯ ಮೇಳಗಳೊಂದಿಗೆ ಆರಂಭವಾಗಿ ಸಮೀಪದ ಹೊಳೆ ಜೋಳದಗುಡ್ಡೆ ವರದಾ ನದಿ ತೀರದ ಶ್ರೀ ಗೋಮಂತೇಶ್ವರ ದೇವಸ್ಥಾನಕ್ಕೆ ತೆರಳಿತು. ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಆಚರಿಸಲಾಯಿತು. ಪುನಃ ಜೋಳದಗುಡ್ಡೆ ಮಾರ್ಗವಾಗಿ ಚಂದ್ರಗುತ್ತಿ ಶ್ರೀ ದೇವಿ ಸನ್ನಿಧಿಯವರೆಗೆ ಪಲ್ಲಕ್ಕಿ ಉತ್ಸವ ಜರುಗಿತು.

ಪಲ್ಲಕ್ಕಿ ಉತ್ಸವಕ್ಕೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಕುಮಾರಿ ಚಾಲನೆ ನೀಡಿದರು. ಉತ್ಸವದ ಬಳಿಕ ಭಕ್ತರು ಸ್ಥಳದಲ್ಲೇ ಒಲೆ ಹೂಡಿ ಅಡುಗೆ ತಯಾರಿಸಿ ನೈವೇದ್ಯ ಅರ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net